ನಟಿ ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ; ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

Rashmika Mandanna
Published on

ನವದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ರಿಯಾಕ್ಟ್​ ಮಾಡಿದ್ದಾರೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಎಐ ತಂತ್ರಜ್ಞಾನ ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

ಡೀಪ್​ಫೇಕ್​ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ದಂಡ ಸಂಹಿತೆ (IPC Section) 465, 469, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66C ಮತ್ತು 66E ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ನಿಜವಾಗಿಗೂ ಆಘಾತಕಾರಿ ವಿಚಾರವಾಗಿದ್ದು, ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದರು. ಇದರ ಬೆನ್ನಲ್ಲೇ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ ಡೀಪ್​ಫೇಕ್​ ವಿಡಿಯೋ ಮಾಡುವವರಿಗೆ 3ಲಕ್ಷ ರೂಪಾಯಿ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net