More

  ರಶ್ಮಿಕಾ ಹೊಸ ಅವತಾರ; ಉರ್ಫಿ ಜಾವೇದ್ ಪ್ರಭಾವ ಎಂದ ನೆಟ್ಟಿಗರು!

  ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ವಿವಿಧ ಕಾರಣಕ್ಕಾಗಿ ಸದಾ ಸುದ್ದಿಯಲ್ಲಿರುತ್ತಾರೆ. ಕೆಲ ಹೇಳಿಕೆಗಳಿಂದ ಸಾಕಷ್ಟು ಟೀಕೆಗೂ ಒಳಗಾಗುತ್ತಿರುತ್ತಾರೆ. ಇದೀಗ ರಶ್ಮಿಕಾ ತನ್ನ ಉಡುಪಿನ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಲ್ಲಿ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಉರ್ಫಿ ಜಾವೇದ್ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರು ಹೋಲಿಸಿ ನೆಟ್ಟಿಗರು ಸಾಮಾಜಿಕ ಜಾಲತಾಣಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

  ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಕಾರ್ಮಕ್ರಮದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಕಪ್ಪು ಉಡುಗೆಯಲ್ಲಿ ಮಿಂಚಿದ್ದರು. ಅಲ್ಲಿ ಅವರ ಪಾಲ್ಗೊಳ್ಳುವಿಕೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮತ್ತೆ ಟ್ರೋಲ್​ಗೆ ಓಳಗಾಗಿದ್ದಾರೆ.

  ಇದನ್ನೂ ಓದಿ: ಐದು ನಗರಗಳಲ್ಲಿ ಮನೆ ಖರೀದಿಸಿದ್ದಾರಾ ರಶ್ಮಿಕಾ ಮಂದಣ್ಣ?

  ಅವಾರ್ಡ್ ಕಾರ್ಯಕ್ರಮಲ್ಲಿ ಕಪ್ಪು ಬಣ್ಣದ ಶಾರ್ಟ್​ ಡ್ರೆಸ್​ನಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದರು. ಇದೀಗ ಚಿತ್ರ ವಿಚಿತ್ರ ಅವರತಾರದಲ್ಲಿ ಕಾಣಿಸಕೊಂಡು ಸಾಮಾಜಿಕ ಜಾಲತಾಣದಲ್ಲಿ ಸದಾ ಟೀಕೆಗೆ ಒಳಗಾಗುತ್ತಿರುವ ಉರ್ಫಿ ಜಾವೇದ್ ಅವರೊಂದಿಗೆ ರಶ್ಮಿಕಾ ಮಂದಣ್ಣ ಅವರನ್ನು ನೆಟ್ಟಿಗರು ಹೋಲಿಕೆ ಮಾಡುತ್ತಿದ್ದಾರೆ. ರಶ್ಮಿಕಾ, ಉರ್ಫಿ ಜಾವೇದ್ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.

  ಇದನ್ನೂ ಓದಿ: ಕನ್ನಡ ಚಿತ್ರರಂಗದಿಂದ ನಿಷೇಧ ವದಂತಿ: ಖಡಕ್​ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts