More

    ಮೇಕಪ್​ ಇಲ್ಲದೆ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ: ಫೋಟೋ ನೋಡಿ ಹುಬ್ಬೇರಿಸಿದ ಅಭಿಮಾನಿಗಳು

    ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಮೇಕಪ್​ ಇಲ್ಲದೆ ಕ್ಯಾಮರಾ ಕಣ್ಣಿಗೆ ಕಾಣಿಸಿಕೊಂಡ ನ್ಯಾಷನಲ್​ ಕ್ರಷ್, ನಟಿ ರಶ್ಮಿಕಾ ಮಂದಣ್ಣ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇದನ್ನೂ ಓದಿ: ಈ ಅಕ್ಕಿಯ ರಫ್ತನ್ನು ನಿಷೇಧಿಸಿದ ಕೇಂದ್ರ ಸರ್ಕಾರ: ಈ ನಿಯಮಗಳಡಿ ಮಾತ್ರ ಅನುಮತಿ ಎಂದ ಡಿಜಿಎಫ್​​ಟಿ

    ದಕ್ಷಿಣ ಭಾರತ ಚಿತ್ರರಂಗದ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಸಿನಿಮಾಗಾಗಿ ಮುಂಬೈ ಏರ್​ಪೋರ್ಟ್​ಗೆ ಆಗಮಿಸಿದರು. ಈ ವೇಳೆ ರಶ್ಮಿಕಾ ಅವರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು ನಟಿ ಜತೆ ಫೋಟೋ ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಮೇಕಪ್​ ಇಲ್ಲದೆ ಕಾಣಿಸಿಕೊಂಡ ರಶ್ಮಿಕಾ ಬ್ಯೂಟಿಗೆ ಮನಸೋತ ಫ್ಯಾನ್ಸ್​, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

    ಬಾಲಿವುಡ್ ನಲ್ಲೂ ಛಾಪು ಮೂಡಿಸಿರುವ ಸೌತ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಅಸಾಧಾರಣ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ‘ಪುಷ್ಪ-2’ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಶ್ರೀವಲ್ಲಿ ಪಾತ್ರದಲ್ಲಿ ಮಿಂಚಲಿದ್ದಾರೆ ಎನ್ನಲಾಗಿದೆ. ಬಾಲಿವುಡ್​ ಚಿತ್ರ ‘ಅನಿಮಲ್’​​ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಇದೀಗ ಈ ಸಿನಿಮಾ ಡಿಸೆಂಬರ್​ 1 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದೆ.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts