

ಹೈದರಾಬಾದ್: ಲಾಕ್ಡೌನ್ ಸಮಯದಲ್ಲಿ ಹಲವು ನಟ-ನಟಿಯರು ತಮ್ಮ ಬಾಲ್ಯದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಷ್ಟೇ ಅಲ್ಲ, ತಮ್ಮ ಬಾಲ್ಯದ ದಿನಗಳನ್ನು ನೆನೆಯುತ್ತಾ ಇರುತ್ತಾರೆ. ದಕ್ಷಿಣ ಭಾರತದ ಜನಪ್ರಿಯ ನಟಿಯೊಬ್ಬರು ಚಿಕ್ಕಂದಿನ ತಮ್ಮ ಫೋಟೋ ಹಂಚಿಕೊಂಡಿದ್ದು, ಈ ಪೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಂದಹಾಗೆ, ಈ ನಟಿ ಯಾರು ಗೊತ್ತಾ? ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ. ಸದ್ಯ ಹೈದರಾಬಾದ್ನಲ್ಲಿರುವ ರಶ್ಮಿಕಾ, ಬಿಡುವಿದ್ದಾಗ, ತಮ್ಮ ಹಳೆಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಕರೊನಾ ಹೋಗುವುದಕ್ಕೆ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದ ರಶ್ಮಿಕಾ, ಮುಂಬೈನಲ್ಲಿ ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆಯೇ ಹೈದರಾಬಾದ್ಗೆ ವಾಪಸ್ಸಾದರು. ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದ ಅವರು, ತೆಲಂಗಾಣದಲ್ಲಿ ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆಯೇ, ಹೈದರಾಬಾದ್ನ ತಮ್ಮ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.