More

  ರಾಷ್ಟ್ರೀಯ ಲೋಕ ಅದಾಲತ್ ಮಾ.9ಕ್ಕೆ

  ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮಾ.9ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಶುಭಾ ಗೌಡರ್ ತಿಳಿಸಿದರು.

  ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ, ಬ್ಯಾಂಕ್ ವ್ಯವಹಾರ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಗಣಿ ಮತ್ತು ಖನಿಜಗಳು, ವೈವಾಹಿಕ ಕುಟುಂಬ ನ್ಯಾಯಾಲಯದ, ಭೂ ಸ್ವಾಧೀನ ಹಾಗೂ ಇತರ ಕ್ರಿಮಿನಲ್ ಪ್ರಕರಣಗಳನ್ನು ಅದಾಲತ್‌ನಲ್ಲಿ ಬಗೆಹರಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
  ರಾಷ್ಟ್ರೀಯ ಲೋಕ ಅದಾಲತ್‌ನಿಂದಾಗಿ ಕಕ್ಷಿದಾರರಿಗೆ ಸಮಯ, ಹಣದ ಉಳಿತಾಯದೊಂದಿಗೆ ನ್ಯಾಯವೂ ಶೀಘ್ರವೇ ದೊರೆಯುತ್ತದೆ. ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ ಮತ್ತೆ ಅಪೀಲು ಹೋಗಲು ಅವಕಾಶ ಇರುವುದಿಲ್ಲ. ಜತೆಗೆ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ ಕೋರ್ಟ್ ಶುಲ್ಕ ಹಿಂದಿರುಗಿಸಲಾಗುತ್ತದೆ. ತ್ವರಿತ ಪ್ರಕರಣ ಇತ್ಯರ್ಥದಿಂದ ಉಭಯ ಕಕ್ಷಿದಾರರಿಗೂ ನೆಮ್ಮದಿಯ ಜೀವನ ಸಾಧ್ಯವಾಗಲಿದೆ ಎಂದು ತಿಳಿಸಿದರು.
  ಜಿಲ್ಲೆಯಲ್ಲಿ ಫೆ.1ರವರೆಗೆ 34,064 ಪ್ರಕರಣಗಳು ಬಾಕಿ ಇದ್ದು, ಇವುಗಳಲ್ಲಿ ಫೆ.23ರವರೆಗೆ ರಾಜಿ ಸಂಧಾನಕ್ಕಾಗಿ 10,559 ಪ್ರಕರಣಗಳನ್ನು ಗುರುತಿಸಲಾಗಿತ್ತು. ಅವುಗಳಲ್ಲಿ 3681 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಉಭಯ ಪಕ್ಷಗಳೂ ಒಪ್ಪಿದಾಗ ಮಾತ್ರ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ನಡೆಸಲಾಗುವುದು ಎಂದು ಹೇಳಿದರು.
  ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂ: 08262-295321 ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಟೋಲ್ ಫ್ರೀ ಸಂಖ್ಯೆ 1800-425-90900, 080-22111730 ಸಂಪರ್ಕಿಸಬಹುದು ಎಂದರು.
  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಟಿ.ನಂದೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಸುಧಾಕರ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts