ಕನಕಗಿರಿ: ತಾಲೂಕಿನ ನವಲಿ ಗ್ರಾಮಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯನ್ನು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಬುಧವಾರ ಸ್ವಾಗತಿಸಿದರು.
ಇದನ್ನೂ ಓದಿ: ಕನ್ನಡ ರಥಯಾತ್ರೆಯ ಅದ್ದೂರಿ ಮೆರವಣಿಗೆ
ಗ್ರಾಮವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಪ್ರಮುಖ ವೃತ್ತಗಳನ್ನು ಹೂವಿನಿಂದ ಅಲಂಕೃತಗೊಳಿಸಿ ರಂಗೋಲಿ ಹಾಕಲಾಗಿತ್ತು. ರಥಯಾತ್ರೆಯ ಮೆರವಣಿಗೆಯಲ್ಲಿ ಕುಂಭ, ಜಾನಪದ ಕಲಾತಂಡಗಳು, ಶಾಲಾ ಕಾಲೇಜು ಮಕ್ಕಳು, ಕನ್ನಡಪ್ರೇಮಿಗಳು ಕನ್ನಡ ಧ್ವಜ ಹಿಡಿದು ವಿವಿಧ ಹೋರಾಟಗಾರರ, ದಾರ್ಶನಿಕರ ವೇಷಭೂಷಣಗಳು ಗಮನಸೆಳೆದವು.
ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕನ್ನಡ ಪರ, ರೈತ ಪರ ಸಂಘಟನೆ ಮುಖಂಡರು, ಅಂಗನವಾಡಿ – ಆಶಾ ಕಾರ್ಯಕರ್ತೆಯರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.