More

    ಮಡಿವಾಳ ಮಾಚಿದೇವರ ರಥೋತ್ಸವ

    ದೇವರಹಿಪ್ಪರಗಿ: ಮಡಿವಾಳ ಮಾಚಿದೇವರ ರಥೋತ್ಸವ ಹಾಗೂ ಪಲ್ಲಕ್ಕಿ ಮಹೋತ್ಸವ ಸಾವಿರಾರು ಭಕ್ತವೃಂದದೊಂದಿಗೆ ಸೋಮವಾರ ವಿಜೃಂಭಣೆಯಿಂದ ಜರುಗಿತು.

    ಪಟ್ಟಣದಲ್ಲಿ ಮಾಚಿದೇವರ ರಥೋತ್ಸವದ ಅಂಗವಾಗಿ ಗದ್ದುಗೆಮಠದಲ್ಲಿ ಸಾಂಪ್ರದಾಯಿಕವಾಗಿ ಪೂಜಾ ವಿಧಿವಿಧಾನಗಳು ನಡೆದವು. ನಂತರ ಆರಾ ಎಂದೇ ಕರೆಯಲಾಗುವ ಪ್ರಕೃತಿಗೆ ಆಹಾರ ನೀಡುವುದು ಜರುಗಿತು.

    ಮಾಚಿದೇವರನ್ನು ಹೊತ್ತ ಪಲ್ಲಕ್ಕಿ ಗದ್ದುಗೆಮಠದಿಂದ ಹೊರಟು ಮೇನ್​ ಬಜಾರ್​ನಲ್ಲಿರುವ ತೇರಿನವರೆಗೆ ಸಾಗಿ 5 ಸುತ್ತು ಪ್ರದಣೆ ಹಾಕಿ ನೈವೇದ್ಯ(ಬಡ್ಯಾಣ) ಅರ್ಪಿಸಲಾಯಿತು. ಬೆಳಗ್ಗೆಯಿಂದಲೇ ಹೂವಿನ ಹಾರ, ತಳಿರು ತೋರಣಗಳಿಂದ ಶೃಂಗಾರಗೊಂಡ ರಥ (ತೇರ) ಕ್ಕೆ ಕಲಶಾರೋಹಣ ನಡೆಯಿತು.

    ಭಕ್ತರು ಉತ್ತತ್ತಿ, ಬಾಳೆಹಣ್ಣುಗಳನ್ನು ರಥಕ್ಕೆ ಅರ್ಪಿಸಿ ನಮಿಸಿದರು. ನಂತರ ಮಾಚಿದೇವರನ್ನು ಹೊತ್ತ ಪಲ್ಲಕ್ಕಿ ಉತ್ಸವ ಹೊರವಲಯದ ಮಡಿವಾಳ ಮಾಚಿದೇವರ ದೇವಸ್ಥಾನದವರೆಗೆ ಸಾಗಿ ಮರಳಿ ಗದ್ದಿಗೆಮಠಕ್ಕೆ ಬಂದು ಸೇರಿತು.

    ಹೆಸ್ಕಾಂ ಹಾಗೂ ಪೊಲೀಸ್​ ಇಲಾಖೆ ಸಿಬ್ಬಂದಿ ರಥೋತ್ಸವ ವೇಳೆ ಯಾವುದೇ ಅಹಿತಕರ ಟನೆ ಸಂಭವಿಸದಂತೆ ಕ್ರಮ ಕೈಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts