ಪಡಿತರ ಚೀಟಿ ಹೊಂದಿರುವವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

ration
Published on

ಬೆಂಗಳೂರು: ಪಡಿತರದಾರರ ಪ್ರತಿ ಕುಟುಂಬಕ್ಕೆ ವಿತರಣೆ ಮಾಡಲಾಗುತ್ತಿರುವ ಐದು ಕೆಜಿ ಅಕ್ಕಿಯ ಜತೆಗೆ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಆಹಾರ ಇಲಾಖೆಯ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ದೊರೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net