More

    ಕೋಟೇಶ್ವರದಲ್ಲಿ 3.76 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ

    ಕುಂದಾಪುರ: ತಾಲೂಕಿನ ಕೋಟೇಶ್ವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನು ಮಾಡಿಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ನಿರೀಕ್ಷಕರು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕೋಟೇಶ್ವರ ಗ್ರಾಮದ ಹಾಲಾಡಿ ರಸ್ತೆಯಲ್ಲಿರುವ ನಂದಿ ಹೋಟೆಲ್‌ನ ಹಿಂಭಾಗದಲ್ಲಿ ಉದಯ್ ಕುಮಾರ್ ಶೆಟ್ಟಿ ಎಂಬುವರಿಗೆ ಸೇರಿದ್ದ ಶೆಡ್‌ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಯತ್ನಿಸಲಾಗುತ್ತಿತ್ತು. ಈ ವೇಳೆ ಮಾಹಿತಿ ಆಧರಿಸಿ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಸಿಬ್ಬಂದಿ ಹಾಗೂ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ದಾಳಿ ಮಾಡಿ ಅಕ್ಕಿ ವಶಕ್ಕೆ ಪಡೆದಿದ್ದಾರೆ.

    3,76,800 ರೂ. ಮೌಲ್ಯದ 25,120 ಕೆಜಿ ಪಡಿತರ ಅಕ್ಕಿ, 2 ಲಕ್ಷ ರೂ. ಮೌಲ್ಯದ ಗೂಡ್ಸ್ ಗಾಡಿ, 4 ಲಕ್ಷ ರೂ ಮೌಲ್ಯದ ಟಾಟಾ ಲಾರಿ, 2,000 ರೂ. ಮೌಲ್ಯದ ಹೊಲಿಗೆ ಯಂತ್ರ ಹಾಗೂ 3,000 ರೂ. ಮೌಲ್ಯದ ತೂಕ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ.

    ಕೋಟೇಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ, ಮಂಗಳೂರು ನಿವಾಸಿ ಆಜಾಮ್, ಉಡುಪಿ ನಿವಾಸಿ ರಮಾ ಪೂಜಾರಿ ಆರೋಪಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts