More

    ರೇವ್ ಪಾರ್ಟಿ ಕೇಸ್ ತನಿಖೆ ಸಿಸಿಬಿ ಹೆಗಲಿಗೆ

    ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿ.ಆರ್. ಫಾಮ್೯ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಆದೇಶಿಸಿದ್ದಾರೆ.

    ಫಾಮ್೯ ಹೌಸ್‌ನಲ್ಲಿ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಾಯದಿಂದ ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಪಾರ್ಟಿಯಲ್ಲಿದ್ದ 30 ಮಹಿಳೆಯರು ಸೇರಿ 100 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಡ್ರಗ್ಸ್ ಸೇವನೆ ಕುರಿತು ವರದಿ ಪಡೆಯಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಈ ಸಂಬಂಧ ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ರೇವ್ ಪಾರ್ಟಿಯಲ್ಲಿ ತೆಲುಗು ನಟ- ನಟಿಯರು, ಪ್ರತಿಷ್ಠಿತ ವ್ಯಕ್ತಿಗಳು ಭಾಗವಹಿಸಿದ್ದ ಕಾರಣಕ್ಕೆ ಪ್ರಕರಣದ ಗಂಭೀರತೆ ಇರುವ ಕಾರಣಕ್ಕೆ ಸಿಸಿಬಿಗೆ ಹೆಚ್ಚಿನ ತನಿಖೆ ನಡೆಸುವ ಜವಾಬ್ದಾರಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮನವಿ ಮಾಡಿದ್ದರು. ಇದಕ್ಕೆ ಡಿಜಿಪಿ ಅಲೋಕ್ ಮೋಹನ್ ಸಮ್ಮತಿಸಿದ್ದಾರೆ.

    ವೈದ್ಯಕೀಯ ವರದಿಯಲ್ಲಿ ಯಾರೆಲ್ಲ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬುದು ಬೆಳಕಿಗೆ ಬರಲಿದೆ. ಇದರ ಆಧಾರದ ಮೇಲೆ ಸಂಬಂಧಪಟ್ಟವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಿದ್ದಾರೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು, ಎಲ್ಲಿಂದ ತರಲಾಗಿತ್ತು. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬ ಮಾಹಿತಿಯನ್ನು ಸಿಸಿಬಿ ಪೊಲೀಸರು ಕೆದಕಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts