

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಮೂವರ ಮೇಲೆ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಈ ಪ್ರಕರಣ ಕುರಿತಾಗಿ ನಟಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.
ನಡೆದಿದ್ದೇನು?: ಕೆಲವೇ ದಿನಗಳ ಹಿಂದೆ ಬಾಲಿವುಡ್ ನಟಿ ರವೀನಾ ಟಂಡನ್ ವಿಡಿಯೋ ವೈರಲ್ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವೈರಲ್ ವಿಡಿಯೋದಲ್ಲಿ ರವೀನಾ ಟಂಡನ್ ಅವರ ಕಾರು ವ್ಯಕ್ತಿಯ ತಾಯಿಗೆ ಡಿಕ್ಕಿ ಹೊಡೆದಿದೆ ಮತ್ತು ನಟಿ ಮೇಲೆ ಹಲ್ಲೆ ನಡೆಸಲಾಗಿತ್ತು. ಆದರೆ, ಮುಂಬೈ ಪೊಲೀಸರ ತನಿಖೆಯಿಂದ ನಟಿ ಕಾರು ಯಾರಿಗೂ ಡಿಕ್ಕಿಯಾಗಿಲ್ಲ ಎಂದು ದೃಢಪಟ್ಟಿದೆ.
ರವೀನಾ ಟಂಡನ್ ಅವರ ವಿಡಿಯೋವನ್ನು ಪೋಸ್ಟ್ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್ ಅವರು ಮದ್ಯಪಾನ ಮಾಡಿದ್ದಾರೆ, ರ್ಯಾಶ್ ಡ್ರೈವಿಂಗ್ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್ನಲ್ಲಿ ಆರೋಪಿಸಲಾಗಿತ್ತು ರವೀನಾ ಟಂಡನ್ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್ ವಿಡಿಯೋವನ್ನು ಡಿಲೀಟ್ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್ ಮುಂದಾಗಿದ್ದಾರೆ .
ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್ ಹಾಕಲಾಗಿದೆ. ರವೀನಾ ಟಂಡನ್ ಅವರ ವಕೀಲರಾದ ಸನಾ ರಯೀಸ್ ಖಾನ್ ಅವರ ಮೂಲಕ ಕಳುಹಿಸಲಾದ ಮಾನನಷ್ಟ ನೋಟಿಸ್, ಪೊಲೀಸರು ಬಹಿರಂಗಪಡಿಸಿದ ಸರಿಯಾದ ಸಂಗತಿಗಳನ್ನು ನಟಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.