Monday, 17th December 2018  

Vijayavani

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ-ಆರೋಗ್ಯ ಸಚಿವರ ಉಡಾಫೆ ಹೇಳಿಕೆ ಪ್ರಸ್ತಾಪ-ಪರಿಷತ್​ನಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ        ಶುರುವಾಯ್ತು ಪೆಥಾಯ್ ಪ್ರತಾಪ-ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ-ಚೆನ್ನೈ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ        ಒಂದೇ ರಸ್ತೆ, ಎರಡು ಇಲಾಖೆ ಬಿಲ್-ಭೂಸೇನೆ, ಪಿಡಬ್ಲ್ಯೂಡಿ ಇಲಾಖೆ ಬಿಲ್​​ಗಾಗಿ ಪೈಪೋಟಿ-ಮುಗಿದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಕೈ ಶಾಸಕ        ಇನ್ನೂ ನಿಂತಿಲ್ಲ ‘ವಿಷ’ಪ್ರಸಾದದ ಎಫೆಕ್ಟ್-ಚಿಕಿತ್ಸೆ ಪಡೀತಿರೋ 30 ಜನ್ರ ಸ್ಥಿತಿ ಗಂಭೀರ-ಆರೋಪಿತರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ        ಇಂದು 3 ರಾಜ್ಯ ಸಿಎಂಗಳ ಪದಗ್ರಹಣ-ರಾಜ್ಯದಿಂದ ಸಿಎಂ ಎಚ್​ಡಿಕೆ, ಸಿದ್ದುಗೆ ವಿಶೇಷ ಆಹ್ವಾನ-ಕೈ ಸಮಾರಂಭದಲ್ಲಿ ತೃತೀಯ ಶಕ್ತಿ ಪ್ರದರ್ಶನ        37ನೇ ವಸಂತಕ್ಕೆ ‘ಉಗ್ರಂ’ ಸ್ಟಾರ್ ಮುರಳಿ-37ನೇ ಬರ್ತಡೇ.. 37 ಕೆಜಿ ಕೇಕ್ ಕಟ್-ಫ್ಯಾನ್ಸ್​​ಗೆ ಭರಾಟೆ ಟೀಸರ್, ಮದಗಜ ಫಸ್ಟ್ ಪೋಸ್ಟರ್ ಗಿಫ್ಟ್       
Breaking News

ಬೆಳಗೆರೆ ವಿರುದ್ಧ ಚಾರ್ಜ್​ ಶೀಟ್ ತೃಪ್ತಿ ತಂದಿದೆ: ಸುನೀಲ್​ ಹೆಗ್ಗರವಳ್ಳಿ

Tuesday, 13.03.2018, 4:12 PM       No Comments

<< ರವಿ ಬೆಳಗೆರೆ ಖಂಡಿತಾ ಜೈಲಿಗೆ ಹೋಗುತ್ತಾರೆ >>

ಹಾಸನ: ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನನಗೆ ತೃಪ್ತಿ ನೀಡಿದೆ ಎಂದು ಪತ್ರಕರ್ತ ರವಿ ಸುನೀಲ್‌ ಹೆಗ್ಗರವಳ್ಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 500 ಪುಟಗಳ ಚಾರ್ಜ್ ಶೀಟ್‌ನಲ್ಲಿ ಬೆಳಗೆರೆ ತಮ್ಮನ್ನು ಕೊಲೆ ಮಾಡಿಸಲು ಏನೆಲ್ಲ ಮಾಡಿದ್ದರು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಯಶೋಮತಿ ಅವರು ಕೂಡ ಅಕ್ರಮ ಸಂಬಂಧದ ಬಗ್ಗೆ ರವಿ ಅನುಮಾನಪಟ್ಟಿದ್ದಾರೆ ಎಂದು ಹೇಳಿಕೆ ನೀಡಿದ್ದು, ಸಿಸಿಬಿ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಬೆಳಗೆರೆ ಅವರ ಅಪರಾಧವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರೆ ಅವರು ಜೈಲಿಗೆ ಹೋಗುವುದು ಖಚಿತ ಎಂದರು.

ಚಾರ್ಜ್ ಶೀಟ್‌ನ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ವಾದ ಮಂಡಿಸಲು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್‌ನ್ನು ಕೊಡಿ ಎಂದು ಸರಕಾರಕ್ಕೆ ಮನವಿ ಮಾಡುತ್ತೇನೆ. ತಮ್ಮನ್ನೇ ಕೊಲೆ ಮಾಡಲು ಯತ್ನಿಸಿದ್ದ ರವಿ ಬೆಳಗೆರೆ ಅವರನ್ನು ಮತ್ತೆ ನಾನು ಸಂಪರ್ಕಿಸುವ ಅಗತ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಳಗೆರೆ ಹೇಳುವುದು ಒಂದು ಮಾಡುವುದು ಇನ್ನೊಂದು. ಜಾಮೀನು ಕೊಡಲಿಲ್ಲ ಅಂದರೆ ಕೋರ್ಟ್ ಆವರಣದಲ್ಲೇ ಸತ್ತು ಹೋಗುತ್ತಾರೆ ಎಂದು ಹೇಳಿ ಅದಾದ ಒಂದೇ ವಾರದಲ್ಲಿ ಐ ಆ್ಯಮ್ ಫಿಟ್ ಅಂತ ಫೇಸ್​ಬುಕ್ ನಲ್ಲಿ ಬರೆದುಕೊಂಡಿದ್ದಾರೆ ಎಂದು ಹೇಳಿದರು.

ಅಂದ್ರೆ ಗಂಭೀರ ಕಾಯಿಲೆ ಉಳ್ಳವರು ವಾರದಲ್ಲೇ ಹೇಗೆ ಹುಷಾರಾಗಲು ಸಾಧ್ಯ? ಅವರಿಗೆ ಸಂದರ್ಭಕ್ಕೆ ತಕ್ಕಂತೆ ಮಾತನಾಡೋ ಕಲೆ ಕರಗತವಾಗಿದೆ. ಬೆಳಗೆರೆ ಖಂಡಿತಾ ಜೈಲಿಗೆ ಹೋಗಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top