More

    ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆಯನ್ನು ಸಮರ್ಥಿಸಿದ ಕೋಚ್ ರವಿಶಾಸ್ತ್ರಿ

    ಸಿಡ್ನಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮ ಮುಂದಿನ ಜನವರಿಯಲ್ಲಿ ಚೊಚ್ಚಲ ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಪಿತೃತ್ವ ರಜೆಯ ಮೇರೆಗೆ ತವರಿಗೆ ಮರಳಲಿರುವ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದ ಕೊನೆಯ 3 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಇದರಿಂದಾಗಿ ವಿರಾಟ್ ಕೊಹ್ಲಿ ಈಗಾಗಲೆ ಕೆಲವರಿಂದ ಟೀಕೆಗಳನ್ನು ಎದುರಿಸಿದ್ದಾರೆ. ಸುನೀಲ್ ಗಾವಸ್ಕರ್, ಎಂಎಸ್ ಧೋನಿ ಅವರಂಥ ನಾಯಕರು ತಿಂಗಳ ಕಾಲ ಮಗುವಿನ ಮುಖವನ್ನೇ ನೋಡಿರಲಿಲ್ಲ ಎಂದು ಕೆಲವರು ಕೊಹ್ಲಿ ನಡೆಯನ್ನು ಟೀಕಿಸಿದ್ದಾರೆ. ಆದರೆ ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ, ನಾಯಕನ ಬೆಂಬಲಕ್ಕೆ ನಿಂತಿದ್ದಾರೆ.

    ‘ನನ್ನ ಪ್ರಕಾರ ಕೊಹ್ಲಿ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಈ ಕ್ಷಣಗಳು ಮತ್ತೆ ಮರಳಲಾರವು. ಮೊದಲ ಮಗು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂಥದ್ದು. ಅವರಿಗೆ ತವರಿಗೆ ಮರಳುವ ಅವಕಾಶ ನೀಡಲಾಗಿದೆ. ಇದರಿಂದ ಅವರು ಹೆಚ್ಚು ಖುಷಿಯಾಗಿದ್ದಾರೆ’ ಎಂದು ರವಿಶಾಸ್ತ್ರಿ ತಿಳಿಸಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ವಿರಾಟ್ ಕೊಹ್ಲಿ ಭಾರತ ತಂಡದ ಪ್ರಮುಖ ಶಕ್ತಿಯಾಗಿದ್ದಾರೆ. ಇದರಿಂದಾಗಿ ಅವರ ಅನುಪಸ್ಥಿತಿ ಖಂಡಿತವಾಗಿಯೂ ತಂಡವನ್ನು ಕಾಡಲಿದೆ ಎಂದಿರುವ ಅವರು, ಕೊಹ್ಲಿ ಗೈರು ತಂಡದ ಯುವ ಆಟಗಾರರಿಗೆ ಉತ್ತಮ ಅವಕಾಶವೂ ಆಗಿದೆ ಎಂದಿದ್ದಾರೆ. ವಿರಾಟ್ ಕೊಹ್ಲಿಯನ್ನು ಟೀಕಿಸಲು ಯಾರಿಗೂ ಅಧಿಕಾರವಿಲ್ಲ. ಯಾಕೆಂದರೆ ಅವರು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಜಯಿಸಿರುವ ಏಷ್ಯಾದ ಏಕೈಕ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

    ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆಯನ್ನು ಸಮರ್ಥಿಸಿದ ಕೋಚ್ ರವಿಶಾಸ್ತ್ರಿ

    ಬಾರ್ಡರ್-ಗಾವಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಆಡಿದ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಲಿದ್ದಾರೆ. ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್‌ಗೆ ಮುನ್ನ ಅನುಷ್ಕಾ ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಇದೆ. ಆದರೆ ಆಸ್ಟ್ರೇಲಿಯಾದಲ್ಲಿನ 14 ದಿನಗಳ ಕ್ವಾರಂಟೈನ್ ನಿಯಮದಿಂದಾಗಿ ವಿರಾಟ್ ಕೊಹ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಮರಳಲು ಸಾಧ್ಯವಾಗುವುದಿಲ್ಲ ಎಂದು ರವಿಶಾಸ್ತ್ರಿ ವಿವರಿಸಿದ್ದಾರೆ.

    ಭಾರತದ ಗೆಲುವಿಗೆ ನೆರವಾಗಿ ತಂದೆಗೆ ಶ್ರದ್ಧಾಂಜಲಿ ಸಲ್ಲಿಸುವೆ ಎಂದ ಸಿರಾಜ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts