More

    ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ಸ್ಥಾನ ತೊರೆಯುವ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

    ಲಂಡನ್: ಕೋಚ್ ಹುದ್ದೆ ತೆರೆಯುತ್ತಿರುವ ಬಗ್ಗೆ ಬೇಸರವಿದ್ದರೂ ನನ್ನ ಅವಧಿಯಲ್ಲಿ ಬಯಸಿದ್ದೆಲ್ಲವನ್ನೂ ಸಾಧಿಸಿದ ಸಂತೃಪ್ತಿ ನನಗಿದೆ ಎಂದು ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಮುಖ್ಯಕೋಚ್ ಹುದ್ದೆ ತೊರೆಯಲಿರುವ ರವಿ ಶಾಸ್ತ್ರಿ ಹೇಳಿದ್ದಾರೆ. 2017ರಲ್ಲಿ 2 ವರ್ಷಗಳ ಮೊದಲ ಅವಧಿಗೆ ಭಾರತ ತಂಡದ ಕೋಚ್ ಆಗಿ ನೇಮಕಗೊಂಡಿದ್ದರು. ಬಳಿಕ ಶಾಸ್ತ್ರಿ ಅವರನ್ನು 2019ರಲ್ಲಿ ಟಿ20 ವಿಶ್ವಕಪ್‌ವರೆಗೂ ಮುಂದುವರಿಸಲಾಗಿತ್ತು. 59 ವರ್ಷದ ರವಿ ಶಾಸ್ತ್ರಿ, ಇಂಗ್ಲೆಂಡ್ ಪ್ರವಾಸದ ವೇಳೆ ಕೋವಿಡ್ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ‘ಭಾರತ ತಂಡ ನನ್ನ ಮಾರ್ಗದರ್ಶನದಲ್ಲಿ ಟಿ20 ವಿಶ್ವಕಪ್ ಗೆಲ್ಲಬೇಕು ಎಂಬುದು ನನ್ನ ಅಭಿಲಾಷೆ. ಇದುವರೆಗೂ ಭಾರತ ತಂಡ ಉತ್ತಮ ನಿರ್ವಹಣೆಯನ್ನೇ ತೋರಿದೆ’ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.

    ಇದನ್ನೂ ಓದಿ: ವಿಶ್ವಕಪ್ ಬಳಿಕ ಟಿ20 ನಾಯಕತ್ವ ತ್ಯಜಿಸಲಿದ್ದಾರೆ ವಿರಾಟ್ ಕೊಹ್ಲಿ

    ನನ್ನ ಐದು ವರ್ಷಗಳ ಅವಧಿಯಲ್ಲಿ ನಾನು ಅಂದುಕೊಂಡಿರುವುದನ್ನು ಸಾಧಿಸಿದ್ದೇನೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ 2 ಬಾರಿ, ಇಂಗ್ಲೆಂಡ್ ಪ್ರವಾಸದಲ್ಲಿ ಒಮ್ಮೆ ಟೆಸ್ಟ್ ಸರಣಿ ಜಯಿಸಿದ್ದು, ಟೆಸ್ಟ್‌ನಲ್ಲಿ ನಂ.1 ಪಟ್ಟಕ್ಕೇರಿದ್ದು ವಿಶೇಷ ಸಾಧನೆಯೇ ಸರಿ ಎಂದರು. ಭಾರತ ತಂಡ ಇಂಗ್ಲೆಂಡ್ ಪ್ರವಾಸ ಸ್ಥಗಿತಗೊಂಡ ವೇಳೆ 4 ಟೆಸ್ಟ್ ಪಂದ್ಯಗಳ ಅಂತ್ಯಕ್ಕೆ 2-1 ರಿಂದ ಮುನ್ನಡೆ ಸಾಧಿಸಿತ್ತು. ಮ್ಯಾಂಚೆಸ್ಟರ್‌ನಲ್ಲಿ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆರಂಭಗೊಳ್ಳುವುದಕ್ಕೂ ಮುನ್ನ ಭಾರತ ತಂಡದ ಸಹಾಯಕ ಸಿಬ್ಬಂದಿಗೆ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿವರೆಗೆ ಪಂದ್ಯವನ್ನು ಮುಂದೂಡಲಾಗಿತ್ತು. ರವಿ ಶಾಸ್ತ್ರಿ ಮಾರ್ಗದರ್ಶನದಲ್ಲಿ ಭಾರತ ತಂಡ ದ.ಆಫ್ರಿಕಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ನಲ್ಲಿ ಟಿ20 ಸರಣಿ ಜಯಿಸಿತ್ತು.

    ಕನ್ನಡಿಗ ಕೆಎಲ್ ರಾಹುಲ್ ಭವಿಷ್ಯದ ಭಾರತ ತಂಡದ ನಾಯಕ ಎಂದ ದಿಗ್ಗಜ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts