More

    ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಆರ್​.ಅಶ್ವಿನ್ ನಂ-1 ಬೌಲರ್

    ನವದೆಹಲಿ: ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್.1 ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರಿಸಿದ್ದಾರೆ. ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಅಶ್ವಿನ್, ಇದೀಗ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಹಿಂದಿಕ್ಕಿ ದಾಖಲೆ ಬರೆದಿದ್ದಾರೆ.

    ಇತ್ತೀಚೆಗೆ ಮುಕ್ತಾಯವಾದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆರ್​.ಅಶ್ವಿನ್ ಸರಣಿಯಲ್ಲಿ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು. ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 25 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಐಸಿಸಿ ಬಿಡುಗಡೆ ಮಾಡಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.

    ಇದನ್ನೂ ಓದಿ: ಸಮಸ್ಯೆ ಸರಿಪಡಿಸಲಾಗುತ್ತಿದೆ ಎಂದ ಪ್ರತಾಪ್ ಸಿಂಹ; ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ? ಕಾಂಗ್ರೆಸ್ ಪ್ರಶ್ನೆ

    ಆರ್​.ಅಶ್ವಿನ್ ಜೇಮ್ಸ್​ ಆ್ಯಂಡರ್ಸನ್ ರೇಟಿಂಗ್ ಅಂಕಗಳನ್ನು ಹಿಂದಿಕ್ಕಿ ನಂ.1 ಪಟ್ಟ ಅಲಂಕರಿಸಿದ್ದಾರೆ. 859 ಅಂಕಗಳೊಂದಿಗೆ ಇಂಗ್ಲೆಂಡ್ ವೇಗೆ ಆ್ಯಂಡರ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (841), ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (825) ಮತ್ತು ಪಾಕಿಸ್ತಾನದ ಶಾಹೀನ್ ಶಾ ಆಫ್ರಿದಿ (787) ಟಾಪ್ 5 ರಲ್ಲಿ ಸ್ಥಾನ ಪಡೆದಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts