More

    ಎಂಎಸ್ ಧೋನಿ, ವಿರಾಟ್ ಕೊಹ್ಲಿ ಸಾಲಿಗೆ ಸೇರ್ಪಡೆಗೊಂಡ ರವೀಂದ್ರ ಜಡೇಜಾ

    ಮೆಲ್ಬೋರ್ನ್: ಭಾರತ ತಂಡ ಮೆಲ್ಬೋರ್ನ್‌ನಲ್ಲಿ ಮಂಗಳವಾರ ಮುಕ್ತಾಯಗೊಂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ. ಈ ಪಂದ್ಯದ ಮೂಲಕ ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ಪಂದ್ಯಗಳನ್ನಾಡಿರುವ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಿದ ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಸಾಲಿಗೆ ಸೇರ್ಪಡೆಗೊಂಡಿದ್ದಾರೆ.

    ಇದನ್ನೂ ಓದಿ: ಆಸೀಸ್ ಗೆ ತಿರುಗೇಟು, ಬಾಕ್ಸಿಂಗ್ ಡೇ ಟೆಸ್ಟ್ ಜಯಿಸಿದ ಭಾರತ ತಂಡ

    ಭಾರತದ ಆಲ್ರೌಂಡರ್ ಜಡೇಜಾ ಇದುವರೆಗೂ 50 ಟೆಸ್ಟ್, 168 ಏಕದಿನ ಹಾಗೂ 50 ಟಿ20 ಪಂದ್ಯಗಳನ್ನಾಡಿದ್ದಾರೆ. ಮೂರು ಮಾದರಿಯಲ್ಲೂ 50 ಪಂದ್ಯಗಳನ್ನಾಡಿರುವುದು ಹೆಮ್ಮೆಯ ವಿಷಯ. ನನ್ನ ಮೇಲೆ ನಂಬಿಕೆ ಇಟ್ಟ ಬಿಸಿಸಿಐಗೆ ಯಾವಾಗೂ ಋಣಿಯಾಗಿರುವೆ ಎಂದು ಜಡೇಜಾ ತಿಳಿಸಿದ್ದಾರೆ. ಮಹಿ ಭಾಯ್, ವಿರಾಟ್ ಸಾಲಿನಲ್ಲಿ ನಾನು ನಿಲ್ಲುವುದು ಹೆಮ್ಮೆಯ ವಿಷಯ.ಬಿಸಿಸಿಐ, ನನ್ನ ತಂಡಕ್ಕೆ ಧನ್ಯವಾದಗಳು, ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ. ಜಡೇಜಾ 2009ರಲ್ಲಿ ಏಕದಿನ ಹಾಗೂ ಟಿ20 ಕ್ರಿಕೆಟ್‌ಗೆ ಹಾಗೂ 2012ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.

    ಇದನ್ನೂ ಓದಿ: ಟೀಮ್ ಸೌಥಿಗೆ 300 ವಿಕೆಟ್, ಸೋಲಿನ ಭೀತಿಯಲ್ಲಿ ಪ್ರವಾಸಿ ಪಾಕಿಸ್ತಾನ ತಂಡ, 

    ಮಾಜಿ ನಾಯಕ ಎಂಎಸ್ ಧೋನಿ, 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 90 ಟೆಸ್ಟ್, 350 ಏಕದಿನ ಹಾಗೂ 98 ಏಕದಿನ ಪಂದ್ಯಗಳನ್ನಾಡಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ 87 ಟೆಸ್ಟ್, 251 ಏಕದಿನ ಹಾಗೂ 85 ಟಿ20 ಪಂದ್ಯಗಳನ್ನಾಡಿದ್ದಾರೆ. ಜಡೇಜಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ 15ನೇ ಅರ್ಧಶತಕ ಬಾರಿಸಿದರು. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 195 ರನ್‌ಗಳಿಸಿದರೆ, ಭಾರತ ಮೊದಲ ಇನಿಂಗ್ಸ್‌ನಲ್ಲಿ 326 ರನ್ ಪೇರಿಸಿ 131 ಮುನ್ನಡೆ ಸಾಧಿಸಿತು. ಬಳಿಕ ಎರಡನೇ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 200 ರನ್‌ಗಳಿಸಿ, ಭಾರತಕ್ಕೆ 70ರನ್ ಗೆಲುವಿನ ಗುರಿ ನೀಡಿತ್ತು. ಬಳಿಕ ಭಾರತ ತಂಡ 15.5 ಓವರ್‌ಗಳಲ್ಲಿ 2 ವಿಕೆಟ್‌ಗೆ ಈ ಗುರಿ ಮುಟ್ಟಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts