More

    ಟೀಂ ಇಂಡಿಯಾಗೆ ಅಘಾತ; ಎರಡನೇ ಟೆಸ್ಟ್​ನಿಂದ ಹೊರಬಿದ್ದ ಜಡೇಜಾ, ರಾಹುಲ್ !

    ಹೈದರಾಬಾದ್‌: ಐದು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ 28 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್​ ಪಂದ್ಯ ನಡೆಯಿತು.

    ಇದನ್ನೂ ಓದಿ:JEE ಬರೆಯಲು ಆಗ್ತಿಲ್ಲ ‘ಮಮ್ಮಿ, ಪಪ್ಪಾ ಕ್ಷಮಿಸಿ; ಡೆತ್​ನೋಟ್​ ಬರೆದಿಟ್ಟು ಮಗಳ ಆತ್ಯಹತ್ಯೆ

    ಈ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಭಾರತಕ್ಕೆ ಮತ್ತೊಂದು ಅಘಾತ ಎದುರಾಗಿದೆ. ಟೀಂ ಇಂಡಿಯಾ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.

    ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್, ಕನ್ನಡಿಗ ಕೆ.ಎಲ್ ರಾಹುಲ್ ಇಬ್ಬರೂ ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಫೆಬ್ರವರಿ 02ರಿಂದ ವೈಜಾಗ್‌ನಲ್ಲಿ ಆರಂಭವಾಗಲಿದೆ.

    ಸರ್​ ರವೀಂದ್ರ ಜಡೇಜಾ, ಇಂಗ್ಲೆಂಡ್ ಎದುರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ವೇಳೆಯಲ್ಲಿ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ಇನ್ನೊಂದೆಡೆ ಕೆ.ಎಲ್ ರಾಹುಲ್ ಬಲ ಪಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ ಎಂದು ಬಿಸಿಸಿಐ ಹೊರಡಿಸಿದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

    ಬಿಸಿಸಿಐ ವೈದ್ಯಕೀಯ ತಂಡವು ಈ ಇಬ್ಬರು ಕ್ರಿಕೆಟಿಗರ ಆರೋಗ್ಯದ ಮೇಲೆ ನಿಗಾಯಿಟ್ಟಿದ್ದು, ಭಾರತ ತಂಡದ ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಂಡಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

    ಗೆಲುವಿಗಾಗಿ ಹೋರಾಡಬೇಕು: ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಗೆಲುವಿಗಾಗಿ ಹೋರಾಟ ನೀಡುವ ಮೂಲಕ ನೀವು ಕೂಡ ಗೆಲುವಿಗಾಗಿ ಹೋರಾಡಬೇಕು ಎಂಬುದನ್ನು ಅಗ್ರ ಕ್ರಮಾಂಕದ ಬ್ಯಾಟರ್​ಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದು ಸರಣಿಯ ಮೊದಲ ಪಂದ್ಯವಾಗಿರುವುದರಿಂದ ಆಟಗಾರರು ಮುಂದಿನ ದಿನಗಳಲ್ಲಿ ತಮ್ಮ ತಪ್ಪನ್ನು ತಿದ್ದಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

    ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ:  ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

    ‘ಸಂಘಿ’ ಶಬ್ದ ಕೆಟ್ಟದ್ದು ಎಂದು ಐಶ್ವರ್ಯ ಹೇಳಿಲ್ಲ: ಸೂಪರ್ ಸ್ಟಾರ್​ ರಜನಿಕಾಂತ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts