More

    ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ; ಈ ಅಪರೂಪದ ಮೈಲಿಗಲ್ಲು ಸಾಧಿಸಿದ ಮೊದಲ ಕ್ರಿಕೆಟಿಗ

    ಚೆನ್ನೈ: ಏಪ್ರಿಲ್​ 08ರಂದು ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನದ ಫಲವಾಗಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಗೆಲುವಿನ ಹಳಿಗೆ ಮರಳಿದೆ. ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ರವೀಂದ್ರ ಜಡೇಜಾ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ.

    ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬೌಲಿಂಗ್​ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ ಪರ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 4 ಓವರ್​ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ಈ ಪಂದ್ಯದಲ್ಲಿ ಜಡೇಜಾ 2 ಅತ್ಯುತ್ತಮ ಕ್ಯಾಚ್​ಗಳನ್ನು ಸಹ ಹಿಡಿದಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.

    Ravindra Jadeja

    ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದಲ್ಲಿ ಎಣ್ಣೆ ರೇಟ್​ ಕಡಿಮೆ ಮಾಡ್ತೀವಿ ಎಂದು ಭರವಸೆ ನೀಡಿದ ಮಾಜಿ ಸಿಎಂ

    ಐಪಿಎಲ್​ನಲ್ಲಿ 1000+ ರನ್, 100 ಕ್ಯಾಚ್ ಹಾಗೂ 100+ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಚ್ಚಿ ಟಸ್ಕರ್ ಕೇರಳ, ಗುಜರಾತ್ ಲಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಜಡೇಜಾ 156 ವಿಕೆಟ್​​​, 2776 ರನ್​ ಹಾಗೂ 100 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್​ನ ಅತ್ಯಂತ ಬೆಸ್ಟ್ ಆಲ್​ರೌಂಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

    ಈ ಮೂಲಕ ರವೀಂದ್ರ ಜಡೇಜಾ ವಿರಾಟ್ ಕೊಹ್ಲಿ, ಸುರೇಶ್ ರೈನಾ, ಕೀರನ್ ಪೊಲಾರ್ಡ್ ಮತ್ತು ರೋಹಿತ್ ಶರ್ಮಾ ಅವರಿರುವ ಸಾಧಕರ ಪಟ್ಟಿಯನ್ನು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ರವೀಂದ್ರ ಜಡೇಜಾ ನಾನು ಈವರೆಗೆ ಹಿಡಿದಿರುವ ಕ್ಯಾಚ್​ಗಳ ಬಗ್ಗೆ ಲೆಕ್ಕ ಹಾಕಲು ಹೋಗಿಲ್ಲ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts