ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಮುಂದಾದ ರವೀಂದ್ರ ಜಡೇಜಾ! ಕಾರಣವೇನು ಗೊತ್ತೇ?

ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿರುವ ಆಲ್ರೌಂಡರ್ ರವೀಂದ್ರ ಜಡೇಜಾ ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಪ್ರಕಟಿಸುವ ಸಾಧ್ಯತೆಗಳಿವೆ. ಸೀಮಿತ ಓವರ್ ಕ್ರಿಕೆಟ್‌ನಲ್ಲಿ ವೃತ್ತಿಜೀವನವನ್ನು ಸುದೀರ್ಘಗೊಳಿಸುವ ಸಲುವಾಗಿ 33 ವರ್ಷದ ಜಡೇಜಾ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ವೇಳೆ ಮುಂದೋಳಿನ ಗಾಯಕ್ಕೆ ತುತ್ತಾಗಿದ್ದ ಜಡೇಜಾ, ಬಳಿಕ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. ಮೊಣಕಾಲು ಗಾಯವೂ ಕಾಡಿರುವುದರಿಂದ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದಾರೆ. ಜಡೇಜಾ … Continue reading ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಮುಂದಾದ ರವೀಂದ್ರ ಜಡೇಜಾ! ಕಾರಣವೇನು ಗೊತ್ತೇ?