ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ರಾ Ravindra Jadeja? ವೈರಲ್​ ಆಗುತ್ತಿದೆ ಕ್ರಿಪ್ಟಿಕ್ ಪೋಸ್ಟ್​

Ravindra jadeja
Published on

ಮುಂಬೈ: 2024ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದರ ಬೆನ್ನಲ್ಲೇ ರೋಹಿತ್ ಶರ್ಮ, ವಿರಾಟ್​ ಕೊಹ್ಲಿ ಹಾಗೂ ರವೀಂದ್ರ ಜಡೇಜಾ (Ravindra Jadeja) ಚುಟುಕು ಮಾದರಿಗೆ ನಿವೃತ್ತಿಯನ್ನು ಘೋಷಿಸುವ ಮೂಲಕ ಕ್ರೀಡಾ ವಲಯದಲ್ಲಿ ಅಚ್ಚರಿಯನ್ನುಂಟು ಮಾಡಿದ್ದರು. ಇದೀಗ ರವೀಂದ್ರ ಜಡೇಜಾ ಟೆಸ್ಟ್​ ಮಾದರಿಗೂ ನಿವೃತ್ತಿ ಘೋಷಿಸುತ್ತಾರೆ ಎಂದು ಹೇಳಲಾಗಿದ್ದು, ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿರುವ ಪೋಸ್ಟ್ ಮತ್ತಷ್ಟು ಪುಷ್ಠಿ ನೀಡಿದೆ.

ಈ ಹಿಂದೆ ಗಾಯಕ್ಕೆ ತುತ್ತಾಗಿ ಟೆಸ್ಟ್​ ಕ್ರಿಕೆಟ್​ನಿಂದ ರವೀಂದ್ರ ಜಡೇಜಾ (Ravindra Jadeja) ದೂರ ಉಳಿದಿದ್ದರು. ಗಾಯದಿಂದ ಚೇತರಿಸಿಕೊಂಡ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಜೆರ್ಸಿಯ ಫೋಟೋ ಹಾಕುವ ಮೂಲಕ ಕಮ್​ಬ್ಯಾಕ್ ಸೂಚನೆ ನೀಡಿದ್ದರು. ಇದೀಗ ಟೆಸ್ಟ್​ ಜೆರ್ಸಿಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿಯ ಸೂಚನೆಯನ್ನು ನೀಡಿದ್ದು, ಸದ್ಯ ಕ್ರೀಡಾವಲಯದಲ್ಲಿ ಈ ಕ್ರಿಪ್ಟಿಕ್ ಪೋಸ್ಟ್ ಚರ್ಚಾಸ್ಪದ ವಿಚಾರವಾಗಿದೆ.

ಮುಂಬರುವ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಬಿಸಿಸಿಐ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ. ಈಚೆಗೆ ಮುಕ್ತಾಯಗೊಂಡ ಬಾರ್ಡರ್​ ಗವಾಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದ ರವೀಂದ್ರ ಜಡೇಜಾ (Ravindra Jadeja) 4 ವಿಕೆಟ್​ಗಳನ್ನು ಪಡೆಯುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದರು. ಇದೀಗ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಜಡೇಜಾರನ್ನು ಆಯ್ಕೆ ಸಮಿತಿ ಪರಿಗಣಿಸುವುದು ಡೌಟ್​ ಎಂದು ಹೇಳಲಾಗಿದ್ದು, ಈ ನಿಟ್ಟಿನಲ್ಲಿ ನಿವೃತ್ತಿಯ ಮುನ್ಸೂಚನೆ ನೀಡಿದ್ರಾ ಎಂಬ ಪ್ರಶ್ನೆ ಮೂಡಲು ಶುರುವಾಗಿದೆ.

ರವೀಂದ್ರ ಜಡೇಜಾ (Ravindra Jadeja) ಟೀಮ್ ಇಂಡಿಯಾ ಪರ 80 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 118 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಶತಕ ಹಾಗೂ 22 ಅರ್ಧಶತಕಗಳೊಂದಿಗೆ ಒಟ್ಟು 3370 ರನ್ ಕಲೆಹಾಕಿದ್ದಾರೆ. ಹಾಗೆಯೇ 150 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 323 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net