ಈ ಒಂದೇ ಒಂದು ತರಕಾರಿ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ! |Raw Onion

Green onion
Published on

Raw onion: ಯಾವುದೇ ಅಡುಗೆ ಪದಾರ್ಥ ರುಚಿಯಾಗಬೇಕಾದರೆ ಅದರಲ್ಲಿ ಈರುಳ್ಳಿ ಇರಲೇಬೇಕು, ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ಭಕ್ಷ್ಯಉತ್ತಮ ರುಚಿ ನೀಡಲು ಸಾಧ್ಯವಿಲ್ಲ. ಈರುಳ್ಳಿ ಅಡುಗೆಗೆ ಮಾತ್ರ ಮೀಸಲಾಗಿಲ್ಲ,ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಕೂಡ ಇವೆ.

ಹಸಿ ಈರುಳ್ಳಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಕೀಲು ನೋವುಗಳನ್ನು ಕಡಿಮೆ ಮಾಡುವುದರಿಂದ ಹಿಡಿದು ಕ್ಯಾನ್ಸರ್​​ವರೆಗೆ ಈರುಳ್ಳಿ ಅನೇಕ ರೀತಿಯ ಕಾಯಿಲೆಗಳನ್ನು ಹೋಗಲಾಡಿಸುತ್ತದೆ.

1.ರೋಗನಿರೋಧಕ ಶಕ್ತಿ ಹೆಚ್ಚಳ

ಹಸಿ ಈರುಳ್ಳಿ ವಿಟಮಿನ್ ಸಿ ಅಂಶದಿಂದ ಸಮೃದ್ಧವಾಗಿದ್ದು, ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದೇಹದಲ್ಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಿಂದ ರಕ್ಷಿಸುವುದಷ್ಟೆ ಅಲ್ಲದೆ, ಶೀತ ಮತ್ತು ಜ್ವರದಿಂದ ರಕ್ಷಿಸಲು ಹಸಿ ಈರುಳ್ಳಿ ಅವಶ್ಯಕವಾಗಿದೆ.

2. ಬಿಪಿ ನಿಯಂತ್ರಣ

ಈರುಳ್ಳಿಯು ಕ್ವೆರ್ಸೆಟಿನ್​ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುವುದರೊಂದಿಗೆ ರಕ್ತ ಪರಿಚಲನೆ ಹೆಚ್ಚಿಸುವ ಮೂಲಕ ರಕ್ತದೊತ್ತಡವನ್ನು(ಬಿಪಿ)ನಿಯಂತ್ರಿಸುತ್ತದೆ.

3.ಮೂಳೆಗಳ ರಕ್ಷಣೆ

ಈರುಳ್ಳಿಯಲ್ಲಿರುವ ಸಲ್ಫರ್ ಭರಿತ ಅಂಶಗಳು ಮೂಳೆಯ ಆರೋಗ್ಯವನ್ನು ಕಾಪಾಡುವುದರೊಂದಿಗೆ, ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಮೂಳೆಮುರಿತದ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೆ ಅಲ್ಲದೆ ಮೆಮೊರಿ ಮತ್ತು ಗಮನವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

4.ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ತಡೆ

ಹಸಿ ಈರುಳ್ಳಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ಗಳು ಕ್ಯಾನ್ಸರ್ ಅನ್ನು ತಡೆಯುತ್ತದೆ. ಇದರಲ್ಲಿರುವ ಕ್ವೆರ್ಸೆಟಿನ್, ಫ್ಲೇವನಾಯ್ಡ್, ಅಲಿಸಿನ್ ನಂತಹ ಸಲ್ಫರ್ ಸಂಯುಕ್ತಗಳು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.

5. ಸೌಂದರ್ಯಕ್ಕೂ ಸೈ

ಹಸಿ ಈರುಳ್ಳಿಯಲ್ಲಿರುವ ವಿಟಮಿನ್ ಸಿ, ಆಂಟಿಆಕ್ಸಿಡೆಂಟ್, ಚರ್ಮದ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿರು ಈರುಳ್ಳಿಯನ್ನು ಪ್ರತಿದಿನ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಮತ್ತು ಕಲೆಗಳು ಬಹಳ ಸುಲಭವಾಗಿ ಮಾಯವಾಗುತ್ತದೆ ಮತ್ತು ತಲೆಗೆ ಹಚ್ಚಿಕೊಳ್ಳುವುದರಿಂದ ಹೊಸ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ.(ಏಜೆನ್ಸೀಸ್)

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net