ಸಂಗೊಳ್ಳಿ ರಾಯಣ್ಣನ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿ

Latest News

ರಾಣೆಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್ ಪೂಜಾರಬಿಜೆಪಿ ಆಭ್ಯರ್ಥಿ: ಸಿಎಂ ಬಿಎಸ್​ ಯಡಿಯೂರಪ್ಪರಿಂದ ಅಚ್ಚರಿಯ ಘೋಷಣೆ

ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ರಾಣೆಬೆನ್ನೂರು ವಿಧಾನ ಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಥಳೀಯ ನಾಯಕ ಅರುಣ್ ಕುಮಾರ್ ಪೂಜಾರ ಅವರನ್ನು ಆಯ್ಕೆ ಮಾಡಲಾಗಿದೆ.ಶುಕ್ರವಾರ...

*ದೊಡ್ಡಣಗುಡ್ಡೆ ಬಾಲಕರ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗೆ ದಕ್ಕೆ ಮೂವರು ಪೊಲೀಸರ ವಶಕ್ಕೆ*

ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ದೊಡ್ಡನಗುಡ್ಡೆ ಪರಿಸರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ, ಬಾಲಕರ ಮೇಲಿನ ಹಲ್ಲೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹೊಮ್ಮದ್...

*ದೊಡ್ಡಣಗುಡ್ಡೆ ಬಾಲಕರ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗೆ ದಕ್ಕೆ ಮೂವರು ಪೊಲೀಸರ ವಶಕ್ಕೆ*

ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ದೊಡ್ಡನಗುಡ್ಡೆ ಪರಿಸರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ, ಬಾಲಕರ ಮೇಲಿನ ಹಲ್ಲೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹೊಮ್ಮದ್...

*ದೊಡ್ಡಣಗುಡ್ಡೆ ಬಾಲಕರ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗೆ ದಕ್ಕೆ ಮೂವರು ಪೊಲೀಸರ ವಶಕ್ಕೆ*

ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ದೊಡ್ಡನಗುಡ್ಡೆ ಪರಿಸರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ, ಬಾಲಕರ ಮೇಲಿನ ಹಲ್ಲೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹೊಮ್ಮದ್...

*ದೊಡ್ಡಣಗುಡ್ಡೆ ಬಾಲಕರ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗೆ ದಕ್ಕೆ ಮೂವರು ಪೊಲೀಸರ ವಶಕ್ಕೆ*

ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ದೊಡ್ಡನಗುಡ್ಡೆ ಪರಿಸರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ, ಬಾಲಕರ ಮೇಲಿನ ಹಲ್ಲೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹೊಮ್ಮದ್...

ಇಟಗಿ/ಖಾನಾಪುರ: 18ನೇ ಶತಮಾನದಲ್ಲೇ ದೇಶದ ನಾಗರಿಕರಲ್ಲಿ ಸ್ವಾತಂತ್ರ ಹೋರಾಟದ ಕಿಚ್ಚನ್ನು ಹೊತ್ತಿಸಿ ದೇಶಾಭಿಮಾನ ಮೆರೆದ ಶೂರ ಸಂಗೊಳ್ಳಿ ರಾಯಣ್ಣನ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿಯಾಗಿವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟರು.

ಖಾನಾಪುರ ತಾಲೂಕಿನ ನಂದಗಡ ಗ್ರಾಮದ ಎನ್.ಆರ್.ಸಿ ಸಂಸ್ಥೆಯ ಆವರಣದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 96.35 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಮತ್ತು ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಹ ಅಧ್ಯಕ್ಷ ಸಿ.ಪುಟ್ಟರಂಗ ಶೆಟ್ಟಿ, ಬ್ರಿಟಿಷರು ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ 75.69 ಕೋಟಿ ವೆಚ್ಚದಲ್ಲಿ ವೀರಭೂಮಿ ನಿರ್ಮಾಣ, ರಾಯಣ್ಣನ ಸಮಾಧಿ ಸ್ಥಳದ ಬಳಿ 18 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ, 3.06 ಕೋಟಿ ವೆಚ್ಚದಲ್ಲಿ ಸಮಾಧಿ ಸ್ಥಳದ ಬಳಿಯ ಐತಿಹಾಸಿಕ ಕೆರೆ ಜೀರ್ಣೋದ್ಧಾರ ಕಾರ್ಯವನ್ನು ಪ್ರಾಧಿಕಾರ ಕೈಗೆತ್ತಿಕೊಂಡಿದೆ.

ಸಂಗೊಳ್ಳಿಯಲ್ಲೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳಿಗಾಗಿ ಈಗಾಗಲೇ ಒಟ್ಟು 120 ಕೋಟಿ ಅನುದಾನ ಬಿಡುಗಡೆಯಾಗಿದೆ. ರಾಯಣ್ಣನ ಹೆಸರಲ್ಲಿ ಪ್ರಾಧಿಕಾರದಿಂದ ವಿವಿಧೆಡೆ ಸಮುದಾಯ ಭವನಗಳನ್ನು ನಿರ್ಮಿಸುವ ಉದ್ದೇಶವನ್ನೂ ಹೊಂದಿರುವುದಾಗಿ ವಿವರಿಸಿದರು.
ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಮಾತನಾಡಿದರು.

ಶಾಸಕಿ ಡಾ.ಅಂಜಲಿ ನಿಂಬಾಳಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ಜಾತಿ, ಮತ, ಭಾಷೆಯ ತಾರತಮ್ಯ ಮಾಡದೇ ಇಡೀ ತಾಲೂಕಿನ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ವಿ ದೇಶಪಾಂಡೆ, ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಧ್ಯಯನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ, ಶಾಸಕರಾದ ಭೈರತಿ ಬಸವರಾಜ, ಮಹಾಂತೇಶ ಕೌಜಲಗಿ, ನಂದಗಡ ಗ್ರಾಪಂ ಅಧ್ಯಕ್ಷ ಪ್ರಭು ಪಾರಿಶ್ವಾಡಕರ, ಪಿಡಿಒ ಕೆ.ಎಸ್ ಗಣೇಶ್ ಮತ್ತಿತರರು ಭಾಗವಹಿಸಿದ್ದರು.

ರಾಯಣ್ಣನ ಮ್ಯೂಜಿಯಂ ಮತ್ತು ವೀರಭೂಮಿಗಳ ನಿರ್ಮಾಣಕ್ಕೆ ಭೂದಾನ ನೀಡಿದವರನ್ನು ವೇದಿಕೆ ಮೇಲಿನ ಗಣ್ಯರು ಸತ್ಕರಿಸಿದರು. ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹೊರಪೇಟೆ ಮಲ್ಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಯಣ್ಣ ಸನಿವಾಸ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಸವರಾಜ ಕುಪ್ಪಸಗೌಡರ ನಿರೂಪಿಸಿದರು. ವಿವೇಕ ಕುರಗುಂದ ವಂದಿಸಿದರು.

ಗ್ರಾಮದೇವಿ ಜಾತ್ರೆಗೆ ಭೇಟಿ

ನಂದಗಡ ಕಾರ್ಯಕ್ರಮಕ್ಕೂ ಮುನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವರು ಮತ್ತು ಗಣ್ಯರು ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು. ಬಳಿಕ ನಂದಗಡ ಗ್ರಾಮದ ರಾಯಣ್ಣನ ಸಮಾಧಿ, ಗ್ರಾಪಂ ಕಚೇರಿ ಮತ್ತು ರಾಯಣ್ಣನನ್ನು ಗಲ್ಲೆಗೇರಿಸಿದ ಸ್ಥಳಗಳಿಗೆ ಭೇಟಿ ನೀಡಿದರು.

ಶಾಸಕರಾಗಿ ಅಧಿಕಾರ ಸ್ವೀಕರಿಸಿದ 8 ತಿಂಗಳ ಅವಧಿಯಲ್ಲಿ ಒಟ್ಟು 170 ಕೋಟಿ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಬಂದಿದ್ದು, ಈಗಾಗಲೇ ಈ ಅನುದಾನಗಳಡಿ ತಾಲೂಕಿನಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಖಾನಾಪುರ ಪಟ್ಟಣದಲ್ಲಿ ಶೀಘ್ರದಲ್ಲೇ 60 ಬೆಡ್‌ಗಳ ನೂತನ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಕಡತ ಮಂಜೂರಾತಿ ಹಂತದಲ್ಲಿದೆ.
| ಡಾ. ಅಂಜಲಿ ನಿಂಬಾಳಕರ, ಶಾಸಕಿ

- Advertisement -

Stay connected

278,469FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...