More

    ರೈತ ಸಂಘದ ಹೋರಾಟಕ್ಕೆ ಬೆದರಿದ ನಗರಸಭೆ: ಹಾಳಾದ ರಸ್ತೆಗಳಿಗೆ ತೇಪೆ ಹಾಕಿಸಿದ ಅಧಿಕಾರಿಗಳು

    ಮಂಡ್ಯ: ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅ.28ರಂದು ನಡೆಸಿದ ಬೈಕ್ ರ‌್ಯಾಲಿಗೆ ಬೆದರಿದ ನಗರಸಭೆ, ನಗರದ ವಿವಿಧೆಡೆ ಹಾಳಾದ ರಸ್ತೆಗಳಿಗೆ ತೇಪೆ ಹಾಕಿದೆ.
    ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮತ್ತು ಮುಖಂಡ ಪ್ರಸನ್ನ ಎನ್.ಗೌಡ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ‌್ಯಾಲಿ ನಡೆಸಿದ್ದರು. ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಶೀಘ್ರವೇ ರಸ್ತೆ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಶನಿವಾರ ವಿವಿಧೆಡೆ ಗುಂಡಿ ಬಿದ್ದಿದ್ದ ರಸ್ತೆಗಳನ್ನು ಮುಚ್ಚಿ ಡಾಂಬರೀಕರಣ ಮಾಡಲಾಗಿದೆ. ಆ ಮೂಲಕ ರೈತ ಸಂಘದ ಹೋರಾಟಕ್ಕೆ ಯಶಸ್ಸು ಸಿಕ್ಕಿದಂತಾಗಿದೆ. ಆದರೆ ಇದು ತಾತ್ಕಾಲಿಕ ಪರಿಹಾರವಷ್ಟೇ ಆಗಿದ್ದು, ನಗರದಲ್ಲಿರುವ ಎಲ್ಲ ರಸ್ತೆಗಳಿಗೂ ಡಾಂಬರೀಕರಣ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.
    ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಸಿ.ಮಧುಚಂದನ್, ಇದು ಹೋರಾಟಕ್ಕಿರುವ ತಾಕತ್ತು. ನಗರಸಭೆ ವಿರುದ್ಧ ಬೃಹತ್ ಬೈಕ್ ರ‌್ಯಾಲಿ ನಡೆಸಿದರ ಪರಿಣಾಮ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಗುಂಡಿ ಮುಚ್ಚುವ ಕೆಲಸ ಮಾಡಿದ್ದಾರೆ. ಹೋರಾಟಕ್ಕೆ ಮನ್ನಣೆ ನೀಡಿದ ನಗರಸಭೆ ಹಾಗೂ ಪಿಡಬ್ಲುೃಡಿ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts