More

    ಫೆ.13ರಂದು ನಗರದಲ್ಲಿ ಬೃಹತ್ ಪ್ರತಿಭಟನೆ: ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಮಾಹಿತಿ

    ಮಂಡ್ಯ: ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 87ನೇ ಜಯಂತ್ಯುತ್ಸವದ ಅಂಗವಾಗಿ ಫೆ.13ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ(ಮೂಲ ಸಂಘಟನೆ) ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ತಿಳಿಸಿದರು.
    ಅಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಪ್ರತಿ ಟನ್ ಕಬ್ಬಿಗೆ 4,500 ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ. ನಿಗದಿ ಮಾಡಬೇಕು. ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ ರೂ. ಹಾಗೂ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 18,000 ರೂ. ಬೆಲೆ ನಿಗದಿಗೊಳಿಸಬೇಕು. ರಾಜ್ಯ ಸರ್ಕಾರ ಮೂರು ಮಾರಕ ಕೃಷಿ ಕಾಯ್ದೆ ರದ್ದುಪಡಿಸುವುದು ಸೇರಿದಂತೆ 10 ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
    ಇನ್ನು ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ಒಬ್ಬ ಅವಿವೇಕಿ. ಸಾಲ ಮನ್ನಾ ಮಾಡಿ ಎಂದು ಯಾವ ರೈತರು ಕೇಳಿಲ್ಲ. ಮಾಹಿತಿ ಇಲ್ಲದೆ ಸುಖಾಸುಮ್ಮನೆ ಟೀಕೆ ಮಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಇನ್ನು ಸರ್ಕಾರವೇ ರೈತರಿಗೆ ಬಾಕಿದಾರವೇ ಹೊರತು ರೈತರು ಸರ್ಕಾರಕ್ಕೆ ಸಾಲಗಾರರಲ್ಲ ಎನ್ನುವ ಸತ್ಯವನ್ನು ಅರಿತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
    ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್‌ಗೌಡ ಮಾತನಾಡಿ, ಬೆಂ-ಮೈ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರು ನಡುವಿನ ನಗರಕ್ಕೆ ಹೋಗಲು ಆಗಮನ ಹಾಗೂ ನಿರ್ಗಮನಕ್ಕೆ ಅವಕಾಶವಿಲ್ಲ. ಕೆಲವೆಡೆ ಕಳಪೆ ಕಾಮಗಾರಿ ಮಾಡಲಾಗಿದೆ. ಆದ್ದರಿಂದ ಈ ಸಮಸ್ಯೆಗಳ ತುರ್ತು ಗಮನಹರಿಸುವಂತೆ ಆಗ್ರಹಿಸಿದರು.
    ಗೌರವಾಧ್ಯಕ್ಷ ಬೋರಾಪುರ ಶಂಕರೇಗೌಡ, ಡಿ.ಎಸ್.ಚಂದ್ರಶೇಖರ್, ಬೋರಲಿಂಗೇಗೌಡ, ತೇಜಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts