25.7 C
Bangalore
Sunday, December 15, 2019

ಆರ್​ಬಿಐ ಜತೆ ಗುದ್ದಾಡಿ ಕೊನೆಗೂ ಗೆದ್ದ ಕೇಂದ್ರ ಸರ್ಕಾರ!

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ನೊಂದಿಗಿನ ಮುಸುಕಿನ ಗುದ್ದಾಟದಲ್ಲಿ ಸದ್ಯಕ್ಕೆ ಕೇಂದ್ರ ಸರ್ಕಾರ ಮೇಲುಗೈ ಸಾಧಿಸಿದೆ. ಸೋಮವಾರ ನಡೆದ ಆರ್​ಬಿಐ ಆಡಳಿತ ಮಂಡಳಿ ಸಭೆ ಸರ್ಕಾರದ ಬಹುತೇಕ ಬೇಡಿಕೆಗೆ ಸಮ್ಮತಿಸಿದ್ದು, ಸುಮಾರು 3 ತಿಂಗಳಿನಿಂದ ನಡೆಯುತ್ತಿದ್ದ ಶೀತಲಸಮರಕ್ಕೆ ತಾತ್ಕಾಲಿಕ ತೆರೆ ಎಳೆದಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ (ಎಂಎಸ್​ಎಂಇ) ವಲಯದ ಸಾಲ ಮರುಸಂಯೋಜನೆ, ಆರ್​ಬಿಐನಲ್ಲಿರುವ ಹೆಚ್ಚುವರಿ ಹಣದ ವರ್ಗಾವಣೆ ಕುರಿತು ನಿಯಮ ರಚನೆಗೆ ಸಮಿತಿ, ಮಾರುಕಟ್ಟೆಗೆ ಹೆಚ್ಚುವರಿ ಹಣ ಪೂರೈಕೆ ಸೇರಿ ಹಲವು ಪ್ರಮುಖ ನಿರ್ಧಾರಗಳು ಹೊರಬಿದ್ದಿವೆ.

ಸುದಿರ್ಘ 9 ಗಂಟೆ ಸಭೆ ನಡೆದಿದ್ದು, ಡಿ.14ರಂದು ನಡೆಯಲಿರುವ ಮುಂದಿನ ಸಭೆಯೊಳಗೆ ವಿವಾದಿತ ವಿಚಾರಗಳಿಗೆ ರ್ತಾಕ ಅಂತ್ಯ ಹಾಡಲು ಸಭೆ ನಿರ್ಧರಿಸಿದೆ. ಹೀಗಾಗಿ ಆರ್​ಬಿಐ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ವದಂತಿಗೂ ತೆರೆ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಪಟೇಲ್ ತಮ್ಮ ನಿಲುವನ್ನು ಸ್ವಲ್ಪ ಸಡಿಲಿಸಿದ್ದಾರೆ ಎನ್ನಲಾಗಿದೆ.

ಹೆಚ್ಚುವರಿ ಹಣ ವರ್ಗಾವಣೆಗೆ ಸಮಿತಿ: ಆರ್​ಬಿಐನಲ್ಲಿರುವ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸುವ ಕುರಿತು ಮಾರ್ಗಸೂಚಿ ರೂಪಿಸಲು ತಜ್ಞರ ಸಮಿತಿ ರಚನೆಗೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸಮಿತಿಯ ವರದಿ ಆಧರಿಸಿ ಹಣ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಸದ್ಯಕ್ಕೆ ಆರ್​ಬಿಐನಲ್ಲಿ 9.6 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವಿದೆ. ಇದು ಆಸ್ತಿಯ ಶೇ.28 ಭಾಗವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾನದಂಡದ ಪ್ರಕಾರ ಶೇ.15 ಇದ್ದರೆ ಸಾಕು ಎನ್ನುವುದು ಸರ್ಕಾರದ ವಾದ. ಹೀಗಾಗಿ 3.6 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವನ್ನು ನೀಡುವಂತೆ ಸರ್ಕಾರ ಕೇಳಿತ್ತು ಎನ್ನಲಾಗಿದೆ.

ಎಂಎಸ್​ಎಂಇ ಕ್ಷೇತ್ರಕ್ಕೆ ನಿರಾಳ

ಎಂಎಸ್​ಎಂಇ ವಲಯಕ್ಕೆ ನೀಡುವ ಸಾಲದ ಪ್ರಮಾಣ ಏರಿಕೆಗೆ ಸಮ್ಮತಿಸಿರುವ ಆರ್​ಬಿಐ, ಬ್ಯಾಂಕ್​ಗಳ ಹಂತದಲ್ಲಿ 25 ಕೋಟಿ ರೂ. ವರೆಗೆ ಸಾಲ ಮರುಸಂಯೋಜನೆಗೆ ಸಮ್ಮತಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ. ಎಂಎಸ್​ಎಂಇ ವಲಯ ಸುಧಾರಣೆಗೆ ಸರ್ಕಾರ ಘೋಷಿಸಿರುವ 12 ಅಂಶಗಳ ಕಾರ್ಯಕ್ರಮಕ್ಕೆ ಇದು ಪೂರಕವಾಗಲಿದೆ.

ಸಭೆಯ ಪ್ರಮುಖ ನಿರ್ಧಾರ

  • ರೆಪೋ ದರದಲ್ಲಿ ಯಾವುದೇ ಬದಲಾವಣೆಯಿಲ್ಲ, ಶೇ.6.5 ಮುಂದುವರಿಕೆ.
  • ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಸಾಲ ನೀಡಿಕೆ ನಿಯಮ ಸಡಿಲಿಸುವ ಕುರಿತು ಆರ್ಥಿಕ ಮೇಲುಸ್ತುವಾರಿ ಮಂಡಳಿ ಪರಿಶೀಲನೆ ನಡೆಸಲಿದೆ.
  • ಬ್ಯಾಂಕೇತರ ಹಣಕಾಸು ವಲಯಕ್ಕೆ ಹೆಚ್ಚುವರಿ ಹಣ ಪೂರೈಕೆಗೆ ಸಮ್ಮತಿ
  • ಸರ್ಕಾರಿ ಬಾಂಡ್​ಗಳ ಹರಾಜಿನ ಮೂಲಕ 8 ಸಾವಿರ ಕೋಟಿ ರೂ. ಸಂಗ್ರಹಕ್ಕೆ ಸಮ್ಮತಿ.
  • ಕೇಂದ್ರ ಸರ್ಕಾರಕ್ಕೆ ಈ ಬಾರಿಯು 50 ಸಾವಿರ ಕೋಟಿ ರೂ. ಲಾಭಾಂಶ ವರ್ಗಾವಣೆ
  • ಡಿ.14ಕ್ಕೆ ನಡೆಯಲಿರುವ ಮುಂದಿನ ಆಡಳಿತ ಸಭೆಯಲ್ಲಿ ಎಲ್ಲ ವಿವಾದಗಳಿಗೆ ತಾರ್ಕಿಕ ಅಂತ್ಯ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...