More

    ಸಂಕಷ್ಟದಲ್ಲಿ ಪೇಟಿಎಂ ಪೇಮೆಂಟ್ಸ್​ ಬ್ಯಾಂಕ್; ವಹಿವಾಟಿನ ಮೇಲೆ ಆರ್​ಬಿಐ ನಿರ್ಬಂಧ ಹೇರಿದ್ದೇಕೆ?

    ನವದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ (RBI) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್​ಬಿಐ ಹಲವು ನಿರ್ಬಂಧಗಳನ್ನು ವಿಧಿಸಿ ಆದೇಶಿಸಿದೆ.

    ಮುಂಬರುವ ಫೆಬ್ರವರಿ 29 ರ ನಂತರ ಪೇಟಿಎಂ ಬಳಕೆದಾರರ ಪ್ರಿಪೇಯ್ಡ್ ಪೇಮೆಂಟ್‌, ವ್ಯಾಲೆಟ್‌ ಮತ್ತು ಫಾಸ್ಟ್‌ಟ್ಯಾಗ್‌ಗಳಿಗೆ ಯಾವುದೇ ಠೇವಣಿ ಅಥವಾ ಟಾಪ್-ಅಪ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಲಿಮಿಟೆಡ್‌ಗೆ ಆರ್‌ಬಿಐ ನಿರ್ಬಂಧಿಸಿ ಆದೇಶ ಹೊರಡಿಸಿದೆ.

    ಪೇಟಿಎಂ ಪೇಮೆಂಟ್ಸ್​​ ಬ್ಯಾಂಕ್​ ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ವಿಚಾರ ಆಡಿಟಿಂಗ್​ನಿಂದ ಗೊತ್ತಾಗಿದೆ. ಎರಡು ವರ್ಷದ ಹಿಂದೆಯೇ ಇದು ನಡೆದಿತ್ತು. 2022ರ ಮಾರ್ಚ್ ತಿಂಗಳಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಸ ಗ್ರಾಹಕರನ್ನು ಹೊಂದಬಾರದು ಎಂದು ಆರ್​ಬಿಐ ನಿರ್ಬಂಧ ಹಾಕಿತ್ತು.

    ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ Aತ್ಯಾಚಾರ; ಪೊಲೀಸ್​ ಠಾಣೆ ಮೆಟ್ಟಿಲೇರಿದ ಬಿಗ್​ಬಾಸ್​ ಮಾಜಿ ಸ್ಫರ್ಧಿ

    ಇದೀಗ 2024ರ ಫೆಬ್ರುವರಿ 29ರ ನಂತರ ಪ್ರೀಪೇಡ್ ಇನ್ಸ್​ಟ್ರುಮೆಂಟ್ಸ್, ವ್ಯಾಲಟ್ಸ್, ಫಾಸ್​ಟ್ಯಾಗ್, ಎನ್​ಸಿಎಂಸಿ ಕಾರ್ಡ್ ಇತ್ಯಾದಿಗೆ ಹಣ ರವಾನಿಸುವಂತಿಲ್ಲ, ಟಾಪಪ್ ಹಾಕುವಂತಿಲ್ಲ. ಈ ಮೊದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಅಕೌಂಟ್ ಹೊಂದಿರುವವರ ಖಾತೆಗೆ ಕ್ಯಾಷ್​ಬ್ಯಾಕ್, ಬಡ್ಡಿ, ರೀಫಂಡ್ ಇತ್ಯಾದಿಯನ್ನು ಹಾಕಲು ಅಡ್ಡಿ ಇಲ್ಲ. ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಸಂಪೂರ್ಣ ವಿತ್​ಡ್ರಾ ಮಾಡಿಕೊಳ್ಳಲು ಯಾವುದೇ ಅಡ್ಡಿ ಆಗಬಾರದು ಎಂದೂ ಆರ್​ಬಿಐ ಪ್ರಕಟಣೆಯಲ್ಲಿ ಸೂಚಿಸಿದೆ.

    ಯುಪಿಐ ಸೇವೆ ಅಬಾಧಿತ

    ಪೇಟಿಎಂ ಪೇಮೆಂಟ್ಸ್​ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ ಹೇರಿರುವ ಬೆನ್ನಲ್ಲೇ ಹಲವು ಗ್ರಾಹಕರು ಆತಂಕಕ್ಕೆ ಈಡಾಗಿದ್ದು, ಯುಪಿಐ ಸೇವೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು ಎಂದು ಕಂಪನಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts