

ಅತೀ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಕ್ರೀಡಾಂಗಣದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ ಹತ್ತು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.
ipl-2025| ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಅಭಿಮಾನಿ ಬಳಗವೇ ಹರಿದು ಬಂದಿದೆ.
ಇನ್ನೂ ಈ ಘಟನೆಗೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಕರ್ನಾಟಕ ಬಿಜೆಪಿ ಆರೋಪ ಮಾಡಿದೆ.
ರೀಲ್ಗಳ ಶೂಟಿಂಗ್ನಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಗಮನ ಸೆಳೆಯುವಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದರು. ಈ ಫೋಟೋ-ಆಪ್ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು, ಇದು ಕ್ರಿಮಿನಲ್ ನಿರ್ಲಕ್ಷ್ಯ, ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ ಇದೆ ಬಿಜೆಪಿ ಆರೋಪವನ್ನು ಮಾಡಿದೆ.
ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳಿಲ್ಲ, ಮೂಲಭೂತ ವ್ಯವಸ್ಥೆಗಳಿಲ್ಲ, ಕೇವಲ ಅವ್ಯವಸ್ಥೆ ಮಾಡಲಾಗಿದೆ. ಅಮಾಯಕ ಜನರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕೆಂಡ ಕಾರಿದೆ.