

ಮುಂಬೈ: ರಂಗು ರಂಗಿನ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ನ 25ನೇ ಪಂದ್ಯಕ್ಕೆ ವಾಂಖೆಡೆ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಸೆಣಸಾಡಲಿದೆ. ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ತೆಯಲ್ಲಿ ಉಭಯ ತಂಡಗಳು ಕಣಕ್ಕಿಳಿಯುತ್ತಿವೆ. ಅಂತಿಮವಾಗಿ ಗೆಲುವು ಯಾರ ಪಾಲಾಗಲಿದ ಎಂದು ಕಾದು ನೋಡಬೇಕಿದೆ.
ಇದುವರೆಗೂ ಆಡಿರುವ ಐದು ಪಂದ್ಯಗಳಲ್ಲಿ 4 ರಲ್ಲಿ ಸೋತು, 1ರಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಮಹತ್ವದಾಗಿದ್ದು, ಪಾಯಿಂಟ್ಸ್ ಟೇಬಲ್ನಲ್ಲಿ ಮೇಲಕ್ಕೇರಬೇಕೆಂದರೆ ಆರ್ಸಿಬಿ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಹಾಲಿ ಟೂರ್ನಿಯಲ್ಲಿ ಆರ್ಸಿಬಿ ಪರ ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ ಆಟಗಾರರು ಅಷ್ಟಾಗಿ ಸದ್ದು ಮಾಡಿಲ್ಲ. ಇನ್ನೂ ವಿದೇಶಿ ಆಟಗಾರರಿಗೆ ಬರುವುದಾದರೆ ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೂನ್ ಗ್ರೀನ್ ಸಂಫೂರ್ಣ ವೈಫಲ್ಯ ಅನುಭವಿಸುತ್ತಿದ್ದು, ಇದುವರೆಗೂ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ಈ ಇಬ್ಬರೂ ಆಟಗಾರರು ವಿಫಲರಾಗಿದ್ದಾರೆ. ಅದರಂತೆ ಈಗ ಮುಂಬೈ ವಿರುದ್ಧದ ಪಂದ್ಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಕೇಳಿ ಬಂದಿದೆ.
ಅದರಂತೆ ಕ್ಯಾಮರೂನ್ ಗ್ರೀನ್ ಹಾಗೂ ಮ್ಯಾಕ್ಸ್ವೆಲ್ ಬದಲಿಗೆ ವಿಲ್ ಜ್ಯಾಕ್ಸ್ ಅಥವಾ ಲಾಕಿ ಫರ್ಗ್ಯೂಸನ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದಂತೆ ರಜತ್ ಪಾಟೀದಾರ್ ಬದಲಾಗಿ ಮಹಿಪಾಲ್ ಲೊಮ್ರೊರ್ ಸ್ಥಾನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಅಂತಿಮವಾಗಿ ಯಾವ ಆಟಗಾರ ಕಣಕ್ಕಿಳಿಯಲಿದ್ದಾರೆ ಎಂದು ಕಾದು ನೋಡಬೇಕಿದೆ.