

ಬೆಂಗಳೂರು: ಐಪಿಎಲ್ 17ನೇ ಆವೃತ್ತಿಗೆ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಆರ್ಸಿಬಿ ತಂಡ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದೆ. ಕಳೆದೆರಡು ವರ್ಷಗಳಿಂದ "ಆರ್ಸಿಬಿ ಅನ್ಬಾಕ್ಸ್' ಹೆಸರಿನಲ್ಲಿ ನಡೆಯುತ್ತ ಬಂದಿರುವ ಕಾರ್ಯಕ್ರಮ ಈ ಬಾರಿ ಮಾರ್ಚ್ 19ರಂದು ನಿಗದಿಯಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ ಅನ್ಬಾಕ್ಸ್ನಲ್ಲಿ ತಂಡದ ಹೊಸ ಜೆರ್ಸಿಯನ್ನೂ ಅನಾವರಣಗೊಳಿಸಲಾಗುವುದು. ಜತೆಗೆ ಅಭಿಮಾನಿಗಳ ಎದುರು ಹಲವು ಅಚ್ಚರಿಯ ಮತ್ತು ವಿಶೇಷ ಘೋಷಣೆಗಳನ್ನು ಮಾಡಲಾಗುವುದು ಎಂದು ಆರ್ಸಿಬಿ ತಂಡ ತಿಳಿಸಿದೆ.
ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದ ಟಿಕೆಟ್ ಮಾರಾಟ ಪ್ರಕ್ರಿಯೆ ಶನಿವಾರದಿಂದ ನಡೆಯಲಿದೆ. ಆರ್ಸಿಬಿ ವೆಬ್ಸೈಟ್ ಮತ್ತು ಆ್ಯಪ್ನಲ್ಲಿ ಟಿಕೆಟ್ ಮಾರಾಟ ಮಾಡಲಾಗುವುದು.