More

    ಚಿನ್ನಸ್ವಾಮಿಯಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ವಿರಾಟ್​​ ಕೊಹ್ಲಿ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ 68ನೇ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಮಗಳೂರು ಹಾಗೂ ಚೆನ್ನೈ ಸೂಪರ್​ಕಿಂಗ್ಸ್​ ಮುಖಾಮುಖಿಯಾಗಿದ್ದು, ಉಭಯ ತಂಡಗಳಿಗು ಈ ಪಂದ್ಯ ಮಹತ್ವದಾಗಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಇಳಿದಿರುವ ಆರ್​ಸಿಬಿ ಪರ ನಾಯಕ ಫಾಫ್​ ಡು ಪ್ಲೆಸಿಸ್​ ಹಾಗೂ ವಿರಾಟ್​ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದು, 3ನೇ ಓವರ್​ ಅಂತ್ಯದ ವೇಳೆ ಮಳೆರಾಯನ ಆಗಮನವಾಗಿದ್ದು, ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

    ಇನ್ನೂ ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದ್ದು, ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್​ ಕೊಹ್ಲಿ ಪಾತ್ರರಾಗಿದ್ದಾರೆ. ಚೆನ್ನಯ ವಿರುದ್ಧ ಬ್ಯಾಟಿಂಗ್​ ಮಾಡುವ ವೇಳೆ 13 ರನ್​ ಗಳಿಸಿದಾಗ ತಂಡ ಒಂದರ ಪರ ತವರು ಮೈದಾನದಲ್ಲಿ ಅತಿ ಹೆಚ್ಚು ರನ್​ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3005 ರನ್​ ಗಳಿಸಿದ್ದು, ತಂಡ ಒಂದರ ತವರು ಮೈದಾನದಲ್ಲಿ ಅತಿ ಹೆಚ್ಚು ರನ್​ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್​ ಕೊಹ್ಲಿ ನಂತರ ಮುಂಬೈ ಇಂಡಿಯನ್ಸ್​ ಪರ ರೋಹಿತ್​ ಶರ್ಮಾ (2295 ರನ್), ಎಬಿ ಡಿವಿಲಿಯರ್ಸ್​ (1960 ರನ್) ನಂತರದ ಸ್ಥಾನದಲ್ಲಿದ್ದಾರೆ.

    Virat Kohli

    ಇದನ್ನೂ ಓದಿ: ಮತ್ತೊಮ್ಮೆ ಅಬ್ಬರಿಸಲು ಸಜ್ಜಾದ ಸ್ಕ್ಯಾಮ್​ ಸರಣಿ; ಶೂಟಿಂಗ್​ಗೂ ಮುನ್ನವೇ ನೋಟಿಸ್​ ಜಾರಿ

    2008ರಲ್ಲಿ ಐಪಿಎಲ್​ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಿಳಿದ ವಿರಾಟ್​ ಕೊಹ್ಲಿ ಈವರೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 22 ಅರ್ಧಶತಕ, 4 ಶತಕಗಳನ್ನು ಸಿಡಿಸಿದ್ದಾರೆ. ಇದಲ್ಲದೆ ವಿರಾಟ್​ ಕೊಹ್ಲಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ 76 ರನ್​ ಗಳಿಸಿದರೆ ಐಪಿಎಲ್​ನಲ್ಲಿ 8,000 ರನ್​ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಆರ್​ಸಿಬಿ ಹಾಗೂ ಚೆನ್ನೈ ಪಾಲಿಗೆ ಈ ಪಂದ್ಯ ಮಹತ್ವದಾಗಿದ್ದು, ಗೆದ್ದ ತಂಡ ಪ್ಲೇಆಫ್​ ಪ್ರವೇಶಿಸಲಿದೆ. ಉಭಯ ತಂಡಗಳು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು, ಆರ್​ಸಿಬಿ ಪರ ಗ್ಲೆನ್​ ಮ್ಯಾಕ್ಸ್​ವೆಲ್​, ಸಿಎಸ್​ಕೆ ಪರ ಮೊಯಿನ್​ ಅಲಿ ಬದಲು ಮಿಚೆಲ್​ ಸ್ಯಾಂಟ್ನರ್​ ಕಣಕ್ಕಿಳಿದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts