More

    RCB vs SRH: ಐಪಿಎಲ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಹೆಡ್! ಆರ್​ಸಿಬಿಗೆ 287 ರನ್ ಸವಾಲು

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಬೌಲಿಂಗ್​ ಆಯ್ಕೆ ಮಾಡಿಕೊಂಡ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಎದುರು ಸನ್​ ರೈಸರ್ಸ್ ಹೈದರಾಬಾದ್​ ತಂಡ ಬರೋಬ್ಬರಿ 287 ರನ್​ ಟಾರ್ಗೆಟ್ ನೀಡಿದೆ.

    ಇದನ್ನೂ ಓದಿ: ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

    ಐಪಿಎಲ್ 17ನೇ ಸೀಸನ್​ನ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.

    ಇಂದು ( ಸೋಮವಾರ) ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಚೇಸಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆರ್​ಸಿಬಿ ಬೌಲರ್ಸ್​ಗಳ ಬೆವರಿಳಿಸಿದ ಟ್ರಾವಿಸ್​ ಹೆಡ್​, ಅಭಿಷೇಕ್​ ಶರ್ಮಾ, ಕ್ಲೆಸನ್​ ಬರೋಬ್ಬರಿ 287 ರನ್​ ಬೃಹತ್ ಮೊತ್ತ ಕಲೆ ಹಾಕುವ ಮೂಲಕ ದಾಖಲೆ ಬರೆದಿದೆ.

    ಈ ಪಂದ್ಯದಲ್ಲಿಸನ್ ರೈಸರ್ಸ್ ಹೈದರಾಬಾದ್ ತಂಡದ ಓಪನರ್​ ಬ್ಯಾಟರ್​​ ಟ್ರಾವಿಸ್​ ಹೆಡ್​ ಐಪಿಎಲ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ್ದಾರೆ.
    ಆರ್​ಸಿಬಿ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಟ್ರಾವಿಸ್​ ಹೆಡ್​ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 50 ಬಳಿಕವೂ ಅಬ್ಬರಿಸಿ ಬೊಬ್ಬಿರಿದರು.

    ಕೇವಲ 39 ಎಸೆತಗಳಲ್ಲಿ ಆಕರ್ಷಕ ಶತಕ ಸಿಡಿಸಿದರು. 8 ಸಿಕ್ಸರ್ ಹಾಗೂ 9 ಬೌಂಡರಿ ಸಿಡಿಸಿದ್ದಾರೆ. 255.26 ಸ್ಟ್ರೈಕ್​ ರೇಟ್​ನೊಂದಿಗೆ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದರು.

    ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts