ಕೊನೆಯಲ್ಲಿ ಇದೇನಿದು ಹೊಸ ಟ್ವಿಸ್ಟ್​? ಇದೇನಾದ್ರೂ ನಡೆದ್ರೆ ಐಪಿಎಲ್ 2025ರಿಂದ ಹೊರಬೀಳಲಿದೆ RCB! ​

RCB
Published on

RCB : ಪ್ರಸ್ತುತ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್​ ಹಂತ ಬಹುತೇಕ ಅಂತಿಮ ಹಂತದಲ್ಲಿದೆ. ಆದರೂ, ಯಾವುದೇ ತಂಡ ಇನ್ನೂ ಅಧಿಕೃತವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಪ್ಲೇಆಫ್ ರೇಸ್‌ನಿಂದ ನಿರ್ಗಮಿಸಿವೆ. ಉಳಿದ ಏಳು ತಂಡಗಳು ಸಹ ಪ್ಲೇಆಫ್ ರೇಸ್‌ನಲ್ಲಿವೆ.

ಸದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿವೆ. ಆದಾಗ್ಯೂ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಹಾಗೊಂದು ವೇಳೆ ಅದು ಸಂಭವಿಸಿದಲ್ಲಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ಕೂಡ ಈ ಸೀಸನ್​ನಲ್ಲಿ ಅರ್ಹತೆ ಕಳೆದುಕೊಳ್ಳುವ ಸಾಧ್ಯತೆಯಿದೆ.

ಐಪಿಎಲ್ 2025ರ ಸೀಸನ್​ನಲ್ಲಿ ಆರ್‌ಸಿಬಿ ಕೂಡ ಸಂಕಷ್ಟದಲ್ಲಿದೆ. ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿರುವ ಆರ್​ಸಿಬಿ, 8 ಪಂದ್ಯಗಳನ್ನು ಗೆದ್ದಿದೆ. ಬಾಕಿ 3 ಪಂದ್ಯಗಳಲ್ಲಿ ಸೋಲುಂಡಿದ್ದಾರೆ. ಆರ್​ಸಿಬಿ 16 ಅಂಕಗಳು ಮತ್ತು +0.482 ನೆಟ್​ ರನ್​ ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಈ ಋತುವಿನಲ್ಲಿ ಆರ್‌ಸಿಬಿ ಇನ್ನೂ ಮೂರು ಪಂದ್ಯಗಳನ್ನು ಆಡಬೇಕಾಗಿದೆ.

ಮುಂಬೈ ಇಂಡಿಯನ್ಸ್ ತಮ್ಮ ಮುಂದಿನ ಮೂರು ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಸೋಲಿಸಿದರೆ, ತಂಡದ ಅಂಕಗಳ ಸಂಖ್ಯೆ 20ಕ್ಕೆ ತಲುಪುತ್ತದೆ. ಅವರು ಸುಲಭವಾಗಿ ಪ್ಲೇಆಫ್‌ಗೆ ಪ್ರವೇಶಿಸುತ್ತಾರೆ. ಇಲ್ಲದಿದ್ದರೆ, ಅವರು ಪಂಜಾಬ್ ವಿರುದ್ಧ ಸೋತರೂ ಉಳಿದ ಎರಡು ಪಂದ್ಯಗಳನ್ನು ಗೆದ್ದರೂ, ಮುಂಬೈ 18 ಅಂಕಗಳೊಂದಿಗೆ ಪ್ಲೇಆಫ್‌ಗೆ ತಲುಪುತ್ತದೆ. ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳನ್ನು ಸೋಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುತ್ತದೆ.

ಗುಜರಾತ್ ಟೈಟಾನ್ಸ್ ತಂಡ ಲಖನೌ ಸೂಪರ್‌ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸೋಲಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತದೆ. ಕೋಲ್ಕತ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಸೋಲಿಸಿದರೆ ಒಟ್ಟು 17 ಅಂಕಗಳೊಂದಿಗೆ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತದೆ.

ಅದೇ ಸಮಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಪಂದ್ಯಗಳಲ್ಲಿ ಲಖನೌ, ಸನ್‌ರೈಸರ್ಸ್ ಮತ್ತು ಕೆಕೆಆರ್ ವಿರುದ್ಧ ಸೋತರೆ, ಕೇವಲ 16 ಅಂಕಗಳು ಮಾತ್ರ ಇರುತ್ತವೆ. ಆಗ ಆರ್‌ಸಿಬಿ ಪ್ಲೇಆಫ್ ರೇಸ್‌ನಿಂದ ಹೊರಗುಳಿಯುತ್ತದೆ. ಮುಂಬೈ, ಪಂಜಾಬ್, ಗುಜರಾತ್ ಮತ್ತು ಕೆಕೆಆರ್ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಆದ್ದರಿಂದ, ಅವರ ಮುಂದಿನ ಮೂರು ಪಂದ್ಯಗಳು ಆರ್‌ಸಿಬಿಗೆ ಬಹಳ ನಿರ್ಣಾಯಕವಾಗಿವೆ. ಈ ಪಂದ್ಯಗಳಲ್ಲಿ ಕನಿಷ್ಠ ಒಂದು ಪಂದ್ಯವನ್ನು ಗೆದ್ದರೂ ಸಹ, ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶಿಸುತ್ತದೆ. ಆದಾಗ್ಯೂ, ಟಾಪ್ -2 ರಲ್ಲಿ ಉಳಿಯಲು, ಎಲ್ಲ ಪಂದ್ಯವನ್ನು ಗೆಲ್ಲಬೇಕಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net