More

    ಆರ್‌ಡಿಪಿಆರ್​​ಗೆ ಅನ್ಯ ಇಲಾಖೆಯವರನ್ನು ವರ್ಗಾವಣೆ ಮಾಡದಂತೆ ನೌಕರರ ಪ್ರತಿಭಟನೆ

    ಬೆಂಗಳೂರು: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ರಾಜ್ ಇಲಾಖೆಗೆ (ಆರ್‌ಡಿಪಿಆರ್ ) ಅನ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಯನ್ನು ವರ್ಗಾವಣೆ ಮಾಡದಂತೆ ಗುರುವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆಯ ಅಧಿಕಾರಿಗಳ ಮತ್ತು ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಅಲ್ಲದೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

    ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಪಂಚಾಯಿತಿಗೆ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಆಗಿ ಜೆಸ್ಕಾಂ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಸ್. ಪ್ರಕಾಶ್ ಅವರನ್ನು ನೇಮಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಇಲಾಖೆ ಆದೇಶಿಸಿದೆ. ಇದನ್ನು ಖಂಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಇಲಾಖೆ ಅಧಿಕಾರಿ-ಸಿಬ್ಬಂದಿ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಿದರು. ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್‌ಗಳು ಪ್ರತಿಭಟನೆ ನಡೆಸಿ ತಾಲೂಕು ಇಒಗೆ ಮನವಿ ಪತ್ರ ಸಲ್ಲಿಸಿದ್ದರು.

    ಗುರುವಾರ ಎಲ್ಲ ತಾಲೂಕುಗಳಲ್ಲಿ ಇಒ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸುವ ಮೂಲಕ ಆಯಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ (ಸಿಇಒ) ಮನವಿ ಪತ್ರ ಸಲ್ಲಿಸಿದ್ದಾರೆ. ಅನ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಯನ್ನು ಆರ್‌ಡಿಪಿಆರ್‌ಗೆ ವರ್ಗಾವಣೆ ಮಾಡಬೇಡಿ. ಈಗಾಗಲೇ ಹೂವಿನಹಡಗಲಿ ತಾಲೂಕು ಪಂಚಾಯಿತಿಗೆ ನೇಮಿಸಿರುವ ಜೆಸ್ಕಾಂ ಇಂಜಿನಿಯರ್ ಪ್ರಕಾಶ್ ವರ್ಗಾವಣೆ ಆದೇಶ ವಾಪಸ್ ಪಡೆಯಬೇಕು. ಇರುವರನ್ನು ವಾಪಸ್ ಮಾತೃ ಇಲಾಖೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು.

    ಆರ್‌ಡಿಪಿಆರ್​​ಗೆ ಅನ್ಯ ಇಲಾಖೆಯವರನ್ನು ವರ್ಗಾವಣೆ ಮಾಡದಂತೆ ನೌಕರರ ಪ್ರತಿಭಟನೆ

    ಸಮಸ್ಯೆ ಏನು?: ಅನ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಯನ್ನು ಆರ್‌ಡಿಪಿಆರ್ ಇಲಾಖೆಗೆ ವರ್ಗಾವಣೆ ಮಾಡಿದರೆ ಇಲ್ಲಿನ ಅಧಿಕಾರಿ ಬಡ್ತಿ ಸಮಸ್ಯೆ ಆಗಲಿದೆ. ಇಲ್ಲಿನ ಕಾರ್ಯನಿರ್ವಾಹಕ ಹುದ್ದೆ ಉಪ ವಿಭಾಗಾಧಿಕಾರಿ ಹುದ್ದಗೆ ಸರಿ ಸಮಾನವಾಗಿದೆ. ಇದು ಪ್ರಥಮ ವರ್ಗ ಹುದ್ದೆಯಾಗಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ 29 ಇಲಾಖೆಗಳ ಆಡಳಿತ ನೋಡಿಕೊಳ್ಳುವ ಜವಾಬ್ದಾರಿ ಹುದ್ದೆ ಆಗಿದೆ. ಅನ್ಯ ಇಲಾಖೆಯಿಂದ ಬಂದವರಿಗೆ ದಿನನಿತ್ಯದ ಕೆಲಸಕ್ಕೆ ತೊಂದರೆ ಆಗಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಮತ್ತು ನೌಕರರ ಸಂಘ ಖಂಡಿಸಿದೆ.

    ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..

    ಮಗನ ಉದ್ಯೋಗಕ್ಕಾಗಿ ಸಂಸದೆಯ ಕಾಲಿಗೆ ಬಿದ್ದ ಮಹಿಳೆ; ಹೈಕೋರ್ಟ್ ತೀರ್ಪಿಗೂ ಬಗ್ಗದ ಆಡಳಿತ ಮಂಡಳಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts