More

    ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಯತ್ನ

    ಅರಸೀಕೆರೆ: ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಹಳೆಯ ಪಿಂಚಿಣಿ ವ್ಯವಸ್ಥೆ ಮರು ಜಾರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

    ನಗರದ ಹೊರವಲಯದಲ್ಲಿರುವ ಕಸ್ತೂರಬಾ ಸೇವಾಶ್ರಮದ ಆವರಣದಲ್ಲಿ ನೌಕರರ ಸಂಘದ ತಾಲೂಕು ಘಟಕ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲಾ ್ಲಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಹೊಸ ಪಿಂಚಣಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವವರ ಹಿತಕಾಯಲು ಸಂಘ ಬದ್ಧವಾಗಿದೆ. ಎನ್‌ಪಿಎಸ್ ರದ್ದು ಮಾಡಿ ಒಪಿಎಸ್ ಮರು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ. ಸರ್ಕಾರಿ ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ರಾಜ್ಯ ಸಂಘದ ಮೇಲಿದ್ದು, ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಲಾಗುವುದು ಎಂದರು.

    ಕೇಂದ್ರ ಸರ್ಕಾರದ ಮಾದರಿಯಲ್ಲೇ ದಿನಭತ್ಯೆ ಹೆಚ್ಚಳ ಮಾಡುವುದು, ಗ್ರಾಮೀಣ ಭಾಗದಲ್ಲಿ ವಸತಿ ವ್ಯವಸ್ಥೆ ಮಾಡಿಕೊಂಡಿರುವ ನೌಕರರಿಗೆ ಭತ್ಯೆ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಎಲ್ಲರ ಸಹಕಾರದಿಂದ ಸಂಘದ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸಲಾಗುತ್ತಿದೆ. 2019ರಿಂದ ಮೊದಲ ಬಾರಿಗೆ ರಾಜ್ಯದ ಉದ್ದಗಲಕ್ಕೂ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವ ಕೆಲಸ ಮಾಡಲಾಗುತ್ತಿದ್ದು, ಇದಕ್ಕೆ ಪೂರಕ ಎನ್ನುವಂತೆ ಅರಸೀಕೆರೆ ತಾಲೂಕು ಸರ್ಕಾರಿ ನೌಕರರ ಸಂಘ ಯಶಸ್ವಿಯಾಗಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಿದೆ ಎಂದರು.

    ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಸರ್ಕಾರ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಿದೆ. ಸಿ.ಎಸ್.ಷಡಾಕ್ಷರಿ ಕಾರ್ಯಶೈಲಿ ಇತರರಿಗೆ ಮಾದರಿ. ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.
    ಬಡವ, ಬಲ್ಲಿದರಿಗೆ ಸರ್ಕಾರದ ಸವಲತ್ತುಗಳನ್ನು ಜನರ ಮನೆಯ ಬಾಗಿಲಿಗೆ ತಲುಪಿಸುವ ಗುರುತರ ಹೊಣೆಗಾರಿಕೆ ಕಾರ್ಯಾಂಗದ ಮೇಲಿದೆ. ಯಾರೊಬ್ಬರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಗರೀಕರಣದ ಪ್ರಭಾವದಿಂದಾಗಿ ಪ್ರಸಕ್ತ ಸನ್ನಿವೇಶದಲ್ಲಿ ಗ್ರಾಮೀಣ ಸಂಸ್ಕೃತಿ ನಾಶವಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು.

    ನಗರಸಭೆ ಅಧ್ಯಕ್ಷ ಸಿ.ಗಿರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಬಿ.ಪರಮೇಶ್, ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ತಾಲೂಕು ಅಧ್ಯಕ್ಷ ಅಶೋಕ್‌ಕುಮಾರ್, ಗೌರವಾಧ್ಯಕ್ಷ ಶೇಖರಪ್ಪ, ಕಾರ್ಯದರ್ಶಿ ಶಿವಾನಂದ ನಾಯ್ಕ, ಉಪಾಧ್ಯಕ್ಷರಾದ ಕೃಷ್ಣಮೂರ್ತಿ, ತ್ರಿಮೂರ್ತಿ, ಮಾಜಿ ಅಧ್ಯಕ್ಷರಾದ ಗೋವಿಂದರಾಜ್, ಬಸವರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts