More

    12 ಲಕ್ಷ ಕಾರ್ಮಿಕರಿಗೆ ತಲುಪಿದೆ ತಲಾ 5 ಸಾವಿರ ರೂ. ಪರಿಹಾರ

    ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ಶ್ರಮಿಕ ವರ್ಗಗಳಿಗೆ ಘೋಷಿಸಲಾದ ವಿಶೇಷ ಪ್ಯಾಕೇಜ್ ಪ್ರಕಾರ 12.39 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಹಣವನ್ನು ಅವರವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

    ಜೆಡಿಎಸ್ ನಾಯಕ ರಮೇಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಕುರಿತು ಲಿಖಿತ ಹೇಳಿಕೆ ಸಲ್ಲಿಸಿದರು.

    ಇದನ್ನೂ ಓದಿ  ಲೇಖಕರ ಸಂಭಾವನೆ ಮೇಲೆಯೂ ಜಿಎಸ್‌ಟಿ: ಕನ್ನಡ ಸಾಹಿತ್ಯ ಪರಿಷತ್ ಆಕ್ಷೇಪ

    ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 21.80 ಲಕ್ಷ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಮಂಡಳಿ ಬಳಿ ಬ್ಯಾಂಕ್ ಖಾತೆಗಳ ವಿವರ ಲಭ್ಯವಿದ್ದ 12.39 ಲಕ್ಷ ಕಾರ್ಮಿಕರಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 619 ಕೋಟಿ ರೂ. ಗಳನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಉಳಿದ ಕಾರ್ಮಿಕರ ಬ್ಯಾಂಕ್ ಖಾತೆ ಹಾಗೂ ಇತರ ವಿವರಗಳನ್ನು ಪರಿಶೀಲಿಸಲು ರಾಜ್ಯಾದ್ಯಂತ 41 ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದು ವಿವರಿಸಿದರು.

    ಅದನ್ನು ಪರಿಗಣಿಸಿದ ಪೀಠ, ಬ್ಯಾಂಕ್ ಖಾತೆ ಇಲ್ಲದ ಕಾರ್ಮಿಕರನ್ನು ನೋಂದಾಯಿಸಿಕೊಂಡಿದ್ದು ಹೇಗೆ, ಅವರಿಗೆ ಪರಿಹಾರ ಹೇಗೆ ಒದಗಿಸಲಾಗುವುದು, ಕಟ್ಟಡ ಕಾರ್ಮಿಕರನ್ನು ನೋಂದಣಿಗೆ ಅನುಸರಿಸುವ ಮಾನದಂಡಗಳೇನು ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

    ಕೆಲಸಕ್ಕೆ ಬಾರದ ಹಾಪ್‌ಕಾಮ್ಸ್ ನೌಕರರ ಮೇಲೆ ಯಡಿಯೂರಪ್ಪ ಗರಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts