More

    ಸಂವಿಧಾನ ಪೀಠಿಕೆ ವಾಚನ

    • ಸರಗೂರು: ಸರಗೂರು ಪಟ್ಟಣದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ತಹಸೀಲ್ದಾರ್ ರುಕೀಯಾ ಬೇಗಂ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಸೇರಿದಂತೆ ಮುಖಂಡರು ಚಾಲನೆ ನೀಡಿದರು.

    • ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ವಿವಿಧ ಘೋಷಣೆಗಳನ್ನು ಕೂಗಲಾಯಿತು. ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂವಿಧಾನ ಪೀಠಿಕೆ ವಾಚನ ಮಾಡಿ ನಮ್ಮ ಸಂವಿಧಾನ, ನಮ್ಮ ಹೆಮ್ಮೆ ಎಂದು ಘೋಷಣೆ ಕೂಗಿದರು. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಶಾಲೆಯ 650ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಮ್ಮ ಸಂವಿಧಾನ, ನಮ್ಮ ಹೆಮ್ಮೆ ಎಂಬ ಅಕ್ಷರ ರೂಪದಲ್ಲಿ ನಿಂತು ಒಕ್ಕೊರಲಿನಿಂದ ಘೋಷ ಮೊಳಗಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.

    • ತಹಸೀಲ್ದಾರ್ ರುಕೀಯಾ ಬೇಗಂ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮಹತ್ವ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.

    • ಇಟ್ನ, ಕೋತ್ತೆಗಾಲ, ಮನುಗನಹಳ್ಳಿ, ಕೆ.ಬೆಳತ್ತೂರು, ಕಲ್ಲಂಬಾಳು, ಮುಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ರಥ ಸಂಚಾರ ಮಾಡಿತು. ಮಹಿಳೆಯರು ರಥಕ್ಕೆ ಪೂರ್ಣಕುಂಭ ಸ್ವಾಗತ ಕೋರಿದರು. ಆಟೋ, ಬೈಕ್ ರ‌್ಯಾಲಿ ಗಮನ ಸೆಳೆಯಿತು. ವಿವಿಧ ಕಲಾತಂಡಗಳು, ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮಕ್ಕೆ ಉತ್ಸವ ತುಂಬಿದರು.
    • ಪಪಂ ಸದಸ್ಯರಾದ ಎಸ್.ಎಲ್.ರಾಜಣ್ಣ, ಶ್ರೀ ನಿವಾಸ, ಚಲುವಕೃಷ್ಣ, ನೂರಳಾಸ್ವಾಮಿ, ಸಣ್ಣ ತಾಯಮ್ಮ, ಗ್ರಾಪಂ ಅಧ್ಯಕ್ಷ ಜಯರಾಮ, ಚೆಲುವಪ್ಪ, ಚಿಕ್ಕಲಾಮ್ಮ, ಗ್ರಾಪಂ ಸದಸ್ಯರಾದ ರಮೇಶ್, ಮಹೇಶ್, ಗೋವಿಂದಾಚಾರಿ, ಮಹಾದೇವ, ಕುಮಾರ್, ಆದಿ ಕರ್ನಾಟಕ ಮಹಾಸಭಾ ತಾಲೂಕು ಅಧ್ಯಕ್ಷ ಸರಗೂರು ಶಿವಣ್ಣ, ಸಂವಿಧಾನ ಸಂರಕ್ಷಣಾ ಸಮಿತಿ ತಾಲೂಕು ಅಧ್ಯಕ್ಷ ಬೀರ್ವಾಳು ಬಸವರಾಜು, ಟೌನ್ ಅಧ್ಯಕ್ಷ ನಾಗರಾಜು, ನಾಯಕ ಸಮಾಜದ ತಾಲೂಕು ಅಧ್ಯಕ್ಷ ಶಂಭುಲಿಂಗನಾಯಕ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts