More

    ಇಲಾಖೆಯಲ್ಲಿ ಅವ್ಯವಹಾರ ನಡೆಯಲು ಸಾಧ್ಯವಿಲ್ಲ, ತನಿಖೆಗೂ ಸಿದ್ಧ, ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಸ್ಪಷ್ಟನೆ

    ಪುತ್ತೂರು: ಪಾರದರ್ಶಕವಾಗಿ ಸೇವೆ ಸಲ್ಲಿಸುತ್ತಿರುವ ಸಿಡಿಪಿಒ ಕಚೇರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ನೋವುಂಟು ಮಾಡಿದೆ. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಅನಾವಶ್ಯಕವಾಗಿ ಸುಳ್ಳು ಆರೋಪ ಮಾಡಲಾಗುತ್ತಿದ್ದು, ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೂ ಸಿದ್ದ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ತಿಳಿಸಿದ್ದಾರೆ.

    ಮಾಧ್ಯಮದವರ ಜತೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಪುತ್ತೂರು ಹಾಗೂ ಕಡಬ ತಾಲೂಕುಗಳ ಉಸ್ತುವಾರಿ ಇದ್ದು, ಹಲವು ಸಭೆಗಳಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಕ್ಷೇತ್ರಕಾರ್ಯವೂ ಇದೆ. ಮಹಿಳೆ ಮತ್ತು ಮಕ್ಕಳ ದೌರ್ಜನ್ಯ ತಡೆಗೆ ಸಂಬಂಧಿಸಿದ ಜವಾಬ್ದಾರಿಯೂ ಇದೆ. ಇತ್ತೀಚೆಗೆ ಶಾಸಕರು ಕಚೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕಚೇರಿಯಲ್ಲಿರಲಿಲ್ಲ. ಪಾರದರ್ಶಕವಾಗಿ ಸೇವೆ ಸಲ್ಲಿಸುತ್ತಿರುವ ನಮ್ಮ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ನೋವುಂಟು ಮಾಡಿದೆ ಎಂದು ತಿಳಿಸಿದ್ದಾರೆ.

    ಟೆಂಡರ್ ಬದಲಾಯಿಸಲು ಅವಕಾಶ ಇಲ್ಲ!

    ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ಮಾಡಲು ಮಹಿಳಾ ಪೂರಕ ಪೌಷ್ಟಿಕ ಆಹಾರ ಸರಬರಾಜು ಘಟಕದ ಟೆಂಡರ್ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದ್ದು, ಇದರಲ್ಲಿ ನಾವು ಹಸ್ತ ಕ್ಷೇಪ ಮಾಡದಂತೆ ಇಲಾಖೆಯಿಂದ ಸ್ಪಷ್ಟ ನಿರ್ದೇಶನವಿದೆ. ಗುಣಮಟ್ಟ ಮತ್ತು ಪರಿಮಾಣದ ಬಗ್ಗೆ ಮಾತ್ರ ನಮಗೆ ನಿಯಂತ್ರಣವಿದ್ದು, ಈಬಗ್ಗೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿದೆ. ಈ ಟೆಂಡರ್‌ನ್ನು ಟೆಂಡರ್ ಬದಲಾಯಿಸಲು, ಆಹಾರ ಸರಬರಾಜನ್ನು ಬದಲಾಯಿಸಲು ನಮಗೆ ಅವಕಾಶವಿಲ್ಲ. ಅದರ ಪ್ರಕ್ರಿಯೆಗಳು ಜಿಲ್ಲಾ ಮಟ್ಟದಲ್ಲಿ ನಡೆಯುತ್ತದೆ. ಅದಕ್ಕೆ ಸಮಿತಿಯಿದೆ. ಗುಣಮಟ್ಟ ಹಾಗೂ ಪರಿಮಾಣದ ಬಗ್ಗೆ ಮೇಲುಸ್ತುವಾರಿ ಮಾತ್ರ ನಮ್ಮ ಇಲಾಖೆ ಮೂಲಕ ನಡೆಯುತ್ತದೆ. ಆಹಾರ ಗುಣಮಟ್ಟದಲ್ಲಿರುವ ಬಗ್ಗೆ ಸಾರ್ವಜನಿಕ ರಿಂದ ದೂರು ಬಂದಾಗ ಪರಿಶೀಲನೆ ನಡೆಸುತ್ತೇವೆ. ಅಲ್ಲದೇ ಖುದ್ದು ನಾವೇ ಪರಿಶೀಲನೆ ನಡೆಸುತ್ತೇವೆ. ಗುಣಮಟ್ಟ ಸರಿಯಿಲ್ಲದಿದ್ದರೆ ಹಿಂದಕ್ಕೆ ಕಳುಹಿಸಲು ಅವಕಾಶವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

    ಸಾರ್ವಜನಿಕವಾಗಿ ಗುರುತಿಸಿಕೊಂಡಿರುವ ನಮ್ಮ ಇಲಾಖೆಯಲ್ಲಿ ಅವ್ಯಹಾರ ನಡೆಯಲು ಸಾಧ್ಯವಿಲ್ಲ. ಅದಕ್ಕೆ ಅವಕಾಶವೇ ಕೊಡುವುದಿಲ್ಲ. ಆಧಾರ ರಹಿತವಾಗಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿದರೆ ಹೇಗೆ?, ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೂ ನಾವು ಸಿದ್ದ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts