More

    ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ದ: ಕೇಂದ್ರ ಸರ್ಕಾರ

    ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಕೆಲ ಸಮಯ ಹಿಡಿಯುತ್ತದೆ. ಆದರೆ, ಯಾವ ಕ್ಷಣದಲ್ಲಿ ಬೇಕಾದರೂ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.

    ಸಂವಿಧಾನದ 370ನೇ ವಿಧಿ ಅಡಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರವೂ ವಿಚಾರಣೆಯನ್ನು ಮುಂದುವರೆಸಿದೆ.

    ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಜಮ್ಮು-ಕಾಶ್ಮೀರಲ್ಲಿ ಪಂಚಾಯತ್​, ಪುರಸಭೆ ಹಾಗೂ ವಿಧಾನಸಭೆ ಚುನಾವಣೆಗಳು ನಡೆಯಬೇಕಾಗಿದೆ. ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಬಗ್ಗೆ ರಾಷ್ಟ್ರೀಯ ಹಾಗೂ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಇದನ್ನೂ ಓದಿ: VIDEO| ವೇದಿಕೆ ಮೇಲೆ ನಟಿಗೆ ಮುತ್ತಿಟ್ಟ ನಿರ್ದೇಶಕ; ಕಿಡಿಕಾರಿದ ನೆಟ್ಟಿಗರು

    ಹೇಳಲು ಸಾಧ್ಯವಿಲ್ಲ

    ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಕಲ್ಪಿಸಲು ಕೆಲ ಸಮಯ ಹಿಡಯುತ್ತದೆ. ನಿರ್ದಿಷ್ಟ ಅವಧಿಯಲ್ಲಿ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ತಾತ್ಕಾಲಿಕವಾಗಿದ್ದು, ಸಂಪೂರ್ಣ ರಾಜ್ಯವನ್ನಾಗಿಸಲು ಕೆಲಸಗಳು ನಡೆಯುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಬಂಡವಾಳ ಹೂಡಿಕೆ, ಅಭಿವೃದ್ದಿ ಸೇರಿದಂತೆ ಅನೇಕ ಕಾರ್ಯಗಳಿಗೆ ಒತ್ತು ನೀಡಲಾಗಿದೆ. ಪ್ರವಾಸಿಗಳ ಸಂಖ್ಯೆಯೂ ಹೆಚ್ಚಳವಾಗಿದ್ದು, ರಾಜ್ಯ ಸ್ಥಾನಮಾನ ಮರುಸ್ಥಾಪಿಸುವುದರ ಭಾಗವಾಗಿದೆ.

    2018ರಲ್ಲಿ 1761 ಕಲ್ಲು ತೂರಾಟ ಪ್ರಕರಣಗಳು ದಾಖಲಾಗಿದ್ದವು. ಆದರೆ, 2023ರಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದ್ದು, ಪೊಲೀಸ್​ ಹಾಗೂ ಭದ್ರತಾ ಪಡೆಗಳಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ನಿರ್ಧಿಷ್ಟ ಕ್ರಮಗಳಿಂದ. 2023ರಲ್ಲಿ ಒಂದು ಕೋಟಿಗೂ ಅಧಿಕ ಪ್ರವಾಸಿಗರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿರುವುದಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದಾರೆ.

    ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​, ಎಸ್.ಕೆ. ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts