ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ದ: ಕೇಂದ್ರ ಸರ್ಕಾರ

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಕೆಲ ಸಮಯ ಹಿಡಿಯುತ್ತದೆ. ಆದರೆ, ಯಾವ ಕ್ಷಣದಲ್ಲಿ ಬೇಕಾದರೂ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಸಂವಿಧಾನದ 370ನೇ ವಿಧಿ ಅಡಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರವೂ ವಿಚಾರಣೆಯನ್ನು ಮುಂದುವರೆಸಿದೆ. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ … Continue reading ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ದ: ಕೇಂದ್ರ ಸರ್ಕಾರ