18.1 C
Bangalore
Saturday, December 7, 2019

ಮಂಡ್ಯ ಸ್ವಾಭಿಮಾನಿಗಳ ವಿಜಯೋತ್ಸವ ಸಮಾವೇಶಕ್ಕೆ ಸಕಲ ಸಿದ್ಧತೆ: ನಾನಾ ಗಣ್ಯರು ಭಾಗವಹಿಸುವ ಸಾಧ್ಯತೆ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಭೂತಪೂರ್ವ ಗೆಲುವು ಸಾಧಿಸಿದ ಸುಮಲತಾ ಅಂಬರೀಷ್​​ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸ್ವಾಭಿಮಾನಿಗಳ ವಿಜಯೋತ್ಸವ ಸಮಾವೇಶ ಆಯೋಜಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಮಂಡ್ಯದ ಸಿಲ್ವರ್ ಜ್ಯೂಬ್ಲಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಚುನಾವಣೆ ವೇಳೆ ಜೋಡೆತ್ತುಗಳೆಂದು ಕರೆಸಿಕೊಂಡ ನಟ ದರ್ಶನ್, ಯಶ್ ಹಾಗೂ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ನಾಲ್ಕು ಕ್ವಿಂಟಾಲ್​ ಪೇಡ ತಂದ ಅಭಿಮಾನಿ

ಸ್ವಾಭಿಮಾನಿಗಳ ವಿಜಯೋತ್ಸವ ಸಮಾವೇಶಕ್ಕೆ ಬರುವ ಜನರಿಗೆ ಹಂಚಲೆಂದು ಅಂಬರೀಷ್​ ಅಭಿಮಾನಿಯೊಬ್ಬರು ಧಾರವಾಡ ಪೇಡ ತಂದಿದ್ದಾರೆ. ಬೆಳಗಾವಿಯ ಸಂಪಗಾವ್ ಗ್ರಾಮದ ನಾರಾಯಣ್ ಕಲಾಲ್ ಅಂಬರೀಷ್ ಅಭಿಮಾನಿಯಾಗಿದ್ದು ಅಂಬರೀಷ್ ಹುಟ್ಟುಹಬ್ಬ, ಸುಮಲತಾರ ಕೃತಜ್ಞತಾ ಸಮಾವೇಶದ ಹಿನ್ನೆಲೆ ನಾಲ್ಕು ಕ್ವಿಂಟಾಲ್ ಪೇಡ ತಂದಿದ್ದು ಸಮಾವೇಶದಲ್ಲಿ ಹಂಚಲಿದ್ದಾರೆ.

20 ಸಾವಿರ ಲಾಡು

ಮಂಡ್ಯದ ಅಂಬರೀಷ್​​​ ಅಭಿಮಾನಿ ಹನಕೆರೆ ಶಶಿ, ಕಾಂಗ್ರೆಸ್ ಮುಖಂಡ ಅರವಿಂದ್ 20 ಸಾವಿರ ಲಾಡು, ಜಹಾಂಗೀರ್ ಸಿದ್ಧಗೊಳಿಸಿದ್ದು ಸಿಹಿ ಹಂಚಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಸಮಾವೇಶಕ್ಕೆ ಸಾವಿರಾರು ಜನ ಸೇರುವ ನಿರೀಕ್ಷೆ ಇದ್ದು, ಸಮಾವೇಶಕ್ಕೆ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಎಸ್​ಪಿ ಶಿವಪ್ರಕಾಶ್ ದೇವರಾಜು ನೇತೃತ್ವ ವಹಿಸಿದ್ದು, 2 ಕೆಎಸ್​ಆರ್​ಪಿ, ನಾಲ್ಕು ಡಿಎಆರ್​ ಸೇರಿ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಸುಮಲತಾ ಭೇಟಿಗೆ ಹಲವೆಡೆಗಳಿಂದ ಜನತೆ ಬಂದಿದ್ದು ವಿವಿಧ ಜಿಲ್ಲೆಗಳಿಂದಲೂ ಆಗಮಿಸುತ್ತಿದ್ದಾರೆ. ಕೆಲವರು ಸುಮಲತಾ ಅವರಿಗೆ ಸನ್ಮಾನ ಮಾಡಲು ಆಗಮಿಸುತ್ತಿದ್ದರೆ, ಮತ್ತೆ ಕೆಲವರು ತಮ್ಮ ಕಷ್ಟ ಹೇಳಿಕೊಂಡು ಸಹಾಯ ಕೇಳಲು ಆಗಮಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...