ವರದಾ-ಬೇಡ್ತಿ ಯೋಜನೆಗಾಗಿ ಪಾದಯಾತ್ರೆ ನಡೆಸಲು ಸಿದ್ಧ

blank

ಶಿಗ್ಗಾಂವಿ: ವರದಾ-ಬೇಡ್ತಿ ಯೋಜನೆಗಾಗಿ ಅವಶ್ಯಕತೆ ಬಿದ್ದರೆ ವರದಾ ನದಿಯಿಂದ ಬೇಡ್ತಿವರೆಗೆ ರೈತರು ಹಾಗೂ ಎಲ್ಲ ರೈತ ಸಂಘಟನೆಗಳ ನೆರವಿನೊಂದಿಗೆ ಪಾದಯಾತ್ರೆ ನಡೆಸಿ, ಈ ಭಾಗದ ರೈತರ ನೀರಾವರಿ, ಕುಡಿಯುವ ನೀರಿನ ಬವಣೆ ನೀಗಿಸಲು ನಿಮ್ಮೊಂದಿಗೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು.

ಪಟ್ಟಣದ ಎಪಿಎಂಸಿ ಅವರಣದಲ್ಲಿ ಕೃಷಿ ಇಲಾಖೆ, ತಾಲೂಕು ಕೃಷಿಕ ಸಮಾಜದ ಸಹಯೋಗದೊಂದಿಗೆ 2024-25ನೇ ಸಾಲಿನ ಆತ್ಮಾ ಯೋಜನೆಯ ಕಿಸಾನ ಗೋಷ್ಠಿ ಕಾರ್ಯಕ್ರಮದಡಿ ಶ್ರೀ ಚೌಧರಿ ಚರಣಸಿಂಗ್​ರವರ ಜನ್ಮದಿನ ಸ್ಮರಣಾರ್ಥ ಅಂಗವಾಗಿ ಸೋಮವಾರ ಆಯೋಜಿಸಿದ್ದ ರೈತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಶಿಗ್ಗಾಂವಿ, ಸವಣೂರ ತಾಲೂಕು ಬಯಲು ಸೀಮೆ ಪ್ರದೇಶವಾಗಿದೆ. ಈ ಭಾಗದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚು ಒತ್ತನ್ನು ಕೊಡಬೇಕಾದ ಅನಿವಾರ್ಯತೆ ಇದೆ. ಬೆಳಗಾವಿ ಅಧಿವೇಶನದಲ್ಲಿ ವರದಾ-ಬೇಡ್ತಿ ಯೋಜನೆ, ಬೆಣ್ಣೆ ಹಳ್ಳದ ಅಭಿವೃದ್ಧಿ ಸೇರಿದಂತೆ ನೀರಾವರಿ ಯೋಜನೆಗಳ ಕುರಿತು ಸದನದಲ್ಲಿ ಈಗಾಗಲೇ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.

ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಹಾರ ಪದಾರ್ಥ ಉತ್ಪಾದನೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರ ಬೆಂಬಲಕ್ಕೆ ನಿಲ್ಲಬೇಕಾದ ಅವಶ್ಯಕತೆ ಇದೆ. ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳು ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕಾಗಿದೆ. ರೈತ ಪರ ಸಂಘಟನೆಗಳು ಸಂಘಟಿತರಾಗಿ ಒಂದೇ ಗುರಿಯೊಂದಿಗೆ ರೈತರ ಕಷ್ಟಕ್ಕೆ ನೆರವಾಗಲು ಮುಂದಾಗಬೇಕು ಎಂದರು.

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಮತ್ತು ರೈತ ಮುಖಂಡರನ್ನು ಸನ್ಮಾನಿಸಲಾಯಿತು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮರೆಡ್ಡಿ ನಡುವಿನಮನಿ, ಸಹಾಯಕ ಕೃಷಿ ನಿರ್ದೇಶಕ ಕೊಟ್ರೇಶ ಗೆಜಲಿ, ವನರಾಜ ಬಣಕಾರ, ಈರಣ್ಣ ಸಮಗೊಂದ, ಶಂಕರಗೌಡ ಪಾಟೀಲ, ಸಂತೋಷ ಕಟಗಿ, ಮುತ್ತಣ್ಣ ಗುಡಗೇರಿ, ಅನಂದ ಕೆಳಗಿನಮನಿ, ಅಶೋಕ ಕಾಳೆ, ಸಂಗಮೇಶ ಕಟಗಿ, ಮಂಜುನಾಥ ಹಾವೇರಿ, ಬಸಮ್ಮ ಬಾದಾಮಗಟ್ಟಿ, ಬಸಲಿಂಗಪ್ಪ ನರಗುಂದ ಸೇರಿದಂತೆ ರೈತರು, ಸಂಘಟನೆಗಳ ಪದಾಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…