ಪ್ರತಿಪಕ್ಷ ಕೇಳುವ ಮುನ್ನವೇ ಸದನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ ಸಿಎಂ ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಜನತೆಗೆ ಸರಿಯಾದ ಸಂದೇಶ ರವಾನಿಸಬೇಕು ಎಂಬ ಕಾರಣಕ್ಕಾಗಿ ಸ್ವಯಂಪ್ರೇರಣೆಯಿಂದ ವಿಶ್ವಾಸಮತ ಯಾಚಿಸಲು ಸಿದ್ಧವಿರುವುದಾಗಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಶುಕ್ರವಾರ ತಿಳಿಸಿದರು.

ನಾನು ಸದನದಲ್ಲಿ ವಿಶ್ವಾಸಮತ ಯಾಚಿಸಲು ಸಿದ್ಧ. ಇದಕ್ಕಾಗಿ ಸಮಯ ಕೊಡಿ. ನನ್ನ ಮೇಲೆ ವಿಶ್ವಾಸ ಇದ್ದರೆ ಮಾತ್ರ ಸಿಎಂ ಸ್ಥಾನದಲ್ಲಿ ಕೂರುತ್ತೇನೆ. ಇಲ್ಲವೆಂದಾದರೆ, ಈ ಹುದ್ದೆಯನ್ನು ದುರುಪಯೋಗ ಮಾಡಿಕೊಳ್ಳದೆ, ಈ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಕುಮಾರಸ್ವಾಮಿ ತಿಳಿಸಿದರು.

ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಅವರು ಮಾತನಾಡಿದರು. ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಿದ್ಧತೆ ನಡೆಸಿರುವಂತೆ ಸ್ವತಃ ಸಿಎಂ ವಿಶ್ವಾಸಮತ ಯಾಚಿಸುವುದಾಗಿ ಹೇಳಿ ಪ್ರತಿಪಕ್ಷದವರಿಗೆ ಶಾಕ್​ ನೀಡಿದರು. ಹಾಗೂ ವಿಶ್ವಾಸಮತ ಯಾಚಿಸಲು ಸಮಯ ನಿಗದಿಪಡಿಸುವಂತೆ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್​ಕುಮಾರ್​ ಅವರಲ್ಲಿ ಮನವಿ ಮಾಡಿಕೊಂಡರು.

ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಸಮಯ ಕೋರಿ ತಮಗೆ ಮಾಡಿಕೊಂಡಿರುವ ಮನವಿ ಕುರಿತು ನಿರ್ಧರಿಸಲು ವಿಧಾನಸಭಾಧ್ಯಕ್ಷರಿಗೆ 7 ದಿನಗಳ ಕಾಲಾವಕಾಶವಿದೆ. ಆದರೂ, ಈ ಕುರಿತು ನಿರ್ಧಾರ ಕೈಗೊಳ್ಳುವ ಬಗ್ಗೆ ವಿಧಾನಸಭಾಧ್ಯಕ್ಷರು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

One Reply to “ಪ್ರತಿಪಕ್ಷ ಕೇಳುವ ಮುನ್ನವೇ ಸದನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ ಸಿಎಂ ಎಚ್​.ಡಿ. ಕುಮಾರಸ್ವಾಮಿ”

Leave a Reply

Your email address will not be published. Required fields are marked *