More

    ಪಿಯು ಇಂಗ್ಲಿಷ್ ಪರೀಕ್ಷೆಗೆ ಸರ್ವ ಸಿದ್ಧತೆ

    ಹಿರೇಕೆರೂರ: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ನಿರ್ದೇಶನದಂತೆ ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಇಎಸ್ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್. ಪಾಟೀಲ ಹೇಳಿದರು.

    ಪಟ್ಟಣದ ಕೆ.ಎಚ್. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜೂ. 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಿಮಿತ್ತ ಬುಧವಾರ ಕಾಲೇಜ್ ಉಪನ್ಯಾಸಕರು, ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಪರೀಕ್ಷೆ ಬರೆಯಬಹುದು. ಸಂಪೂರ್ಣ ಕಾಲೇಜ್​ಅನ್ನು ಸ್ಯಾನಿಟೈಸ್ ಮಾಡಲಾಗಿದೆ. ನಮ್ಮ ಮಹಾವಿದ್ಯಾಲಯದಲ್ಲಿ ತಾಲೂಕಿನ 7 ಪದವಿಪೂರ್ವ ಕಾಲೇಜುಗಳ 530 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್​ನಿಂದ ಪರೀಕ್ಷಿಸಲಾಗುವುದು. ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್ ಸಿಂಪಡಿಸಿ ಕೊಠಡಿಯೊಳಗೆ ಬಿಡಲಾಗುವುದು. ಪ್ರತಿಯೊಬ್ಬರಿಗೂ ಮಾಸ್ಕ್ ವಿತರಿಸಲಾಗುವುದು ಎಂದು ತಿಳಿಸಿದರು.

    ಪ್ರಾಚಾರ್ಯ ಎಸ್. ವೀರಭದ್ರಯ್ಯ ಮಾತನಾಡಿ, ಪ್ರತಿ 4 ಅಡಿಗೆ ಒಬ್ಬ ವಿದ್ಯಾರ್ಥಿ ಕೂರಲು ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಅನಾರೋಗ್ಯ ಕಂಡುಬಂದಲ್ಲಿ ಅಥವಾ ವೈರಸ್ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುವ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.

    ಮಹಾವಿದ್ಯಾಲಯದ ಉಪನ್ಯಾಸಕರಾದ ಎಸ್.ಬಿ. ನೂಲ್ವಿ, ಎಂ.ಎಸ್. ರುದ್ರಗೌಡ, ಜಾವಿದ್ ಬಾಷಾ, ಕೆ.ಎಚ್. ಮಾವಿನತೋಪ, ರೇಖಾ ಎಂ.ಪಿ., ರಮೇಶ ಮೆಣಸಿನಗೇರಿ, ಕೆ.ಆರ್. ಲಮಾಣಿ, ಆರ್.ಎಂ. ಕರೆಗೌಡ, ಎನ್.ಬಿ. ಮುದಕನಗೌಡರ, ಎಂ.ಜಿ. ಕಡದಕಟ್ಟಿ, ಸಿ.ಸಿ. ಮರಿಗೋಳಪ್ಪನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts