More

    ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

    ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗನನ್ನು ದುಷ್ಕರ್ಮಿಗಳು ಸೋಮನಹಳ್ಳಿಯ ಸಮೀಪ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಿದ್ದಾರೆ.

    ವಿನೋದ್ (35) ಕೊಲೆಯಾದವರು. ಇವರು ನಗರದ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗನಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಬುಧವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಸೋಮನಹಳ್ಳಿಯ ಸಮೀಪ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ವಿನೋದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಕಗ್ಗಲಿಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

    ರಾಘವೇಂದ್ರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ ಪ್ರಕರಣ: 11 ಜನರ ವಿರುದ್ಧ ಎಫ್‌ಐಆರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts