ವಿಜಯವಾಣಿ ಸುದ್ದಿಜಾಲ ಧಾರವಾಡ
ದೇಶದ ಭವಿಷ್ಯವಾಗಿರುವ ಇಂದಿನ ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಂಡು ಸದೃಢ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಎಸ್ಡಿಎಂಇ ಸೊಸೈಟಿ ಕಾರ್ಯದರ್ಶಿ ವಿ. ಜೀವಂಧರಕುಮಾರ ಹೇಳಿದರು.
ನಗರದ ಜೆಎಸ್ಎಸ್ನ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘಗಳ ಸಮಾರೋಪ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಅವರು ಮಾತನಾಡಿದರು.
ಯಶಸ್ಸು ಯಾರ ಸ್ವತ್ತೂ ಅಲ್ಲ. ನಿರಂತರ ಸಾಧನೆಯಿಂದ ಯಶಸ್ಸು ಕಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಮುನ್ನಡೆದಾಗ ಗುರಿ ಮುಟ್ಟಲು ಸಾಧ್ಯ. ಅತಿಯಾದ ಮೊಬೈಲ್ ಬಳಕೆಯಿಂದ ಮನೋಸ್ಥೆರ್ಯಕ್ಕೆ ಧಕ್ಕೆಯಾಗುತ್ತದೆ. ಪರೀಕ್ಷಾ ಭಯಕ್ಕೆ ತುತ್ತಾಗದೆ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮಾತನಾಡಿ, ಪಿಯುಸಿ ಕಲಿಕಾ ಹಂತವು ಬದುಕಿನ ಪ್ರಮುಖ ಘಟ್ಟ. ಈ ಹಂತದಲ್ಲಿ ನಮ್ಮನ್ನು ನಾವು ಗುರುತಿಸಿಕೊಳ್ಳುವುದು ಅಗತ್ಯ. ಈ ದಿಸೆಯಲ್ಲಿ ಕಷ್ಟಪಟ್ಟು ಓದದೇ ಇಷ್ಟಪಟ್ಟು ಓದಿದರೆ ಬದುಕು ಬಂಗಾರವಾಗಲಿದೆ ಎಂದರು.
ಮಹಾವೀರ ಉಪಾಧ್ಯೆ, ಡಾ. ಎಸ್.ಕೆ ಪಾಟೀಲ, ಬಾಹುಬಲಿ ಚೌಗಲಾ, ಚಂದನಾ ಅಂಗಡಿ, ಶಿಕ್ಷಕರು, ಸಿಬ್ಬಂದಿ, ಇತರರು ಇದ್ದರು.
ಭಾರತಿ ಶಾನಭಾಗ ವರದಿ ವಾಚಿಸಿದರು. ಸುಪ್ರಿಯಾ ಜನಗೌಡ ಸ್ವಾಗತಿಸಿದರು. ಭೂಮಿಕಾ ಪವಾರ ನಿರೂಪಿಸಿದರು. ಶ್ರದ್ಧಾ ಮುಧೋಳೆ ವಂದಿಸಿದರು.
ನಿರಂತರ ಶ್ರಮದಿಂದ ಕನಸು ಸಾಕಾರ

You Might Also Like
ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…