More

    ಕನಕದಾಸರ ಕೀರ್ತನೆಗಳ ಸಾರ ಅರಿತುಕೊಳ್ಳಿ

    ಪಂಚನಹಳ್ಳಿ (ಕಡೂರು): ಸಮಾಜ ಸುಧಾರಣೆಯಲ್ಲಿ ಕನಕದಾಸರ ಕೊಡುಗೆ ಅಪಾರ. ಅವರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಸಾಮಾಜಿಕ ಪಿಡುಗಾದ ಅಸ್ಪಶ್ಯತೆ ನಿವಾರಿಸಲು ಕೀರ್ತನೆಗಳನ್ನು ರಚಿಸುವ ಮೂಲಕ ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

    ರಾಯಣ್ಣ ಯುವ ಬ್ರಿಗೇಡ್‌ನಿಂದ ಸಿಂಗಟಗೆರೆಯಲ್ಲಿ ಬುಧವಾರ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾಸ ಶ್ರೇಷ್ಠರ ಕೀರ್ತನೆಗಳನ್ನು ಪಠ್ಯದಲ್ಲಿ ಅಳವಡಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
    ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ದಾಸ ಶ್ರೇಷ್ಠರ ಜಯಂತಿ ಆಚರಣೆಯ ಮಹತ್ವವನ್ನು ತಿಳಿಸಿಕೊಡಬೇಕು. ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
    ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆಂಪರಾಜು ಮಾತನಾಡಿ, ಕನಕದಾಸರ ಕೀರ್ತನೆಗಳಲ್ಲಿನ ಸಾರವನ್ನು ಅರಿತುಕೊಂಡು ಪಾಲಿಸಿದರೆ ಸಮಾಜ ಪ್ರಗತಿ ಸಾಧಿಸಲು ಸಾಧ್ಯ. ಶಿಕ್ಷಕರು ಮತ್ತು ಪಾಲಕರು ಮಕ್ಕಳಿಗೆ ದಾಸ ಶ್ರೇಷ್ಠರ ಆದರ್ಶಗಳನ್ನು ಅಳವಡಿಸಿಕೊಳ್ಳುವಂತೆ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.
    ಕನಕದಾಸರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ವಿವಿಧ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪ್ರಮುಖರಾದ ಶರತ್ ಕೃಷ್ಣಮೂರ್ತಿ, ಮರುಗುದ್ದಿ ಮನು, ನೂತನ್, ಶಾಂತಾ ಸುರೇಶ, ಗಿರೀಶ್ ಆರಾಧ್ಯ, ಪ್ರವೀಣ್ ಕೆಂಪೇಗೌಡ, ಚೇತನ್, ಮಹೇಶ್, ರವಿ, ಜಗದೀಶ್, ಕಲ್ಲೇಶಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts