More

  ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ

  ಕೊಟ್ಟೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಾರ್ವಜನಿಕರ ಹಿತದೃಷ್ಟಿಯಿಟ್ಟುಕೊಂಡು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.

  ಹರಕನಾಳು ಗ್ರಾಮದ ದ್ಯಾಮಜ್ಜಿ ಕೆರೆ ಹೂಳೆತ್ತುವ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಸರ್ವರ ಪಾಲುದಾರಿಕೆಯೊಂದಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸಂಸ್ಥೆಯ ಮುಖ್ಯಗುರಿಯಾಗಿದೆ.

  ಇದನ್ನು ಓದಿ: ಅಂತರ್ಜಲಮಟ್ಟ ಅರಿಯಲು ‘ಎಐ’ ತಂತ್ರಜ್ಞಾನ

  ಒಟ್ಟು 8 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತುವ ಕಾರ್ಯ ನಡೆಯಲಿದ್ದು, ಈಗಾಗಲೇ 4 ಲಕ್ಷ ರೂ. ಕಾಯ್ದಿರಿಸಲಾಗಿದೆ. ಉಳಿದ ಹಣವನ್ನು ಸಂಸ್ಥೆಯೇ ಭರಿಸಲಿದೆ. ರಾಜ್ಯದಲ್ಲಿ 36 ಸಾವಿರ ಕೆರೆಗಳಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 747 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಕೆರೆಗಳು ಪುನಶ್ಚೇತನಗೊಂಡು ನೀರು ಸಂಗ್ರಹವಾದರೆ ಅಂತರ್ಜಲವೃದ್ಧಿಯಾಗಿ ರೈತರಿಗೆ ಅನುಕೂಲವಾಗಲಿದೆ ಎಂದರು.

  ದ್ಯಾಮಜ್ಜಿ ಕೆರೆ ಹೂಳೆತ್ತುವ ಸಮಿತಿ ಅಧ್ಯಕ್ಷ ಕಲ್ಲೇಶ ಮಾತನಾಡಿ, ಕೆರೆಯ ಹೂಳು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾದರೆ ಸುತ್ತಲಿನ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ರೈತರಿಗೆ ಅನುಕೂಲವಾಗಲಿದೆ ಎಂದರು. ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಶಿವಾನಂದ ಆಚಾರ್, ಗ್ರಾಪಂ ಉಪಾಧ್ಯಕ್ಷ ಎಸ್.ಕೆ. ಕೊಟ್ರೇಶ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts