ಮನ್ನಣೆ ಗಳಿಸಿದ ಪಡಿತರ ವಿತರಕರ ಸಂಘ

ಬೆಳಗಾವಿ: ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಅತ್ಯುತ್ತಮ ಕೆಲಸ ಮಾಡಿ ಮೆಚ್ಚುಗೆ ಪಡೆದಿದೆ ಎಂದು ಶಾಸಕ ಆಸ್ೀ ಸೇಠ್ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಗ್ರಹಣ ಮತ್ತು ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಪಡಿತರ ವಿತರಕರಿಗೆ ಬಿಪಿಎಲ್ ಸೇರಿ ಎಲ್ಲ ಕಾರ್ಡುಗಳ ಗ್ರಾಹಕರಿಗೆ ನೀಡುವ ದವಸ ಧಾನ್ಯಗಳಿಗೆ ಸರ್ಕಾರದಿಂದ ಕೊಡುವ ಬೆಂಬಲ ಬೆಲೆಯನ್ನು ಹೆಚ್ಚು ಮಾಡಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದರು.

ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಮಾತನಾಡಿ, ಸಹಕಾರಿ ಪಡಿತರ ವಿತರಕರಿಗೆ ಸರ್ಕಾರದಿಂದ ಕಮಿಷನ್ ಹಣ ತಡವಾಗಿ ಬರುತ್ತಿದೆ. ಹೊಸ ಹೊಸ ತಂತ್ರಾಂಶಗಳಿಂದ ಸಮಸ್ಯೆಯಾಗುತ್ತಿದೆ. ಫಲಾನುಭವಿಗಳಿಗೆ ಎಷ್ಟು ಧಾನ್ಯಗಳನ್ನು ವಿತರಿಸುತ್ತಾರೆ ಎನ್ನುವುದು ದಾಖಲು ಮಾಡುವುದು ಕಷ್ಟವಾಗುತ್ತಿದೆ. ಇದನ್ನು ಸರಳೀಕರಣ ಮಾಡಿಕೊಡಬೇಕಿದೆ ಎಂದರು.

ಉಪಮೇಯರ್ ರೇಷ್ಮಾ ಪಾಟೀಲ, ಪಾಲಿಕೆ ಉಪಆಯುಕ್ತ ಉದಯಕುಮಾರ ತಳವಾರ, ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ರಾಜಶೇಖರ ತಳವಾರ, ಜಿಲ್ಲಾಧ್ಯಕ್ಷ ಶಾಂತಿನಾಥ ಬುಡವಿ ಇತರರಿದ್ದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…