28.5 C
Bengaluru
Monday, January 20, 2020

ಸರ್ಕಾರಿ ಆಸ್ಪತ್ರೆ ಸುಧಾರಣೆ ಜನಾಭಿಪ್ರಾಯಕ್ಕೆ ಮನ್ನಣೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

| ಕೆ.ಎಂ.ಪಂಕಜ ಬೆಂಗಳೂರು

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ನನ್ನ ಆಸ್ಪತ್ರೆ’ (ಮೇರಾ ಅಸ್ಪತಾಲ್) ಕಾರ್ಯಕ್ರಮ ರೂಪಿಸಲಾಗಿದ್ದು, ಇದರ ಮೂಲಕ ಸರ್ಕಾರಿ ಆಸ್ಪತ್ರೆ ಬಗ್ಗೆ ನಿಮ್ಮ ಅಭಿಪ್ರಾಯವನ್ನು ನೇರವಾಗಿ ಸರ್ಕಾರಕ್ಕೆ ತಿಳಿಸಿ ಬದಲಾವಣೆಗೆ ಕೈಜೋಡಿಸಬಹುದಾಗಿದೆ. ಇದಕ್ಕಾಗಿ ಯಾರ ಬಳಿಯೂ ಹೋಗಿ ದೂರು ನೀಡಬೇಕಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಮರುದಿನ ನಿಮ್ಮ ಮೊಬೈಲ್​ಗೆ ಬರುವ ಎಸ್​ಎಂಎಸ್ ಅಥವಾ ಕರೆಗೆ ಪ್ರತಿಕ್ರಿಯೆ ನೀಡಿದರೆ ಸಾಕು. ಮುಂದಿನದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ.

‘ನನ್ನ ಆಸ್ಪತ್ರೆ’ ರೋಗಿಗಳ ಸಮೀಕ್ಷಾ ಕಾರ್ಯಕ್ರಮವಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಸೇವೆಗಳ ಹಾಗೂ ಅಲ್ಲಿನ ಲೋಪದೋಷಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದು ವ್ಯವಸ್ಥೆಯನ್ನು ಸರಿಪಡಿಸುವುದು ಈ ಕಾರ್ಯಕ್ರಮದ ಉದ್ದೇಶ.

ಈ ಸಂಬಂಧ ಮೊದಲ ಹಂತದಲ್ಲಿ ರಾಜ್ಯದ 47 ಇ-ಆಸ್ಪತ್ರೆಗಳಲ್ಲಿ ‘ನನ್ನ ಆಸ್ಪತ್ರೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದ್ದು, ಎರಡನೇ ಹಂತದಲ್ಲಿ 88 ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ಆರ್ಥಿಕ ವರ್ಷದ ವೇಳೆಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಯಶಸ್ವಿ ಅನುಷ್ಠಾನಗೊಳಿಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೊಬೈಲ್ ಅಪ್ಲಿಕೇಷನ್

ಮೊಬೈಲ್​ನಲ್ಲಿ ಪ್ಲೇಸ್ಟೋರ್​ಗೆ ಹೋಗಿ ‘ನನ್ನ ಆಸ್ಪತ್ರೆ’ ಅಪ್ಲಿಕೇಷನ್ ಡೌನ್​ಲೋಡ್ ಮಾಡಿಕೊಂಡು ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ನೋಂದಣಿ ಮಾಡಿದ ಮೊಬೈಲ್ ಸಂಖ್ಯೆ ನಮೂದಿಸಿ ನಿಮ್ಮ ಅಭಿಪ್ರಾಯ ನೀಡಬಹುದು. ಇಲ್ಲವೆ, www.meraaspataal.nhp.gov.in ವೆಬ್​ಸೈಟ್​ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆ ನಮೂದಿಸಿ ಅಭಿಪ್ರಾಯ ತಿಳಿಸಬಹುದಾಗಿದೆ.

ಐವಿಆರ್ ವ್ಯವಸ್ಥೆ

‘ನನ್ನ ಆಸ್ಪತ್ರೆ’ ಕಾರ್ಯಕ್ರಮದಲ್ಲಿ ರೋಗಿಗಳ ಪ್ರತಿಕ್ರಿಯೆ ಪಡೆಯಲು ಇಂಟರ್ಯಾಕ್ಟೀವ್ ವಾಯ್್ಸ ರೆಸ್ಪಾನ್ಸ್’ (ಐವಿಆರ್) ವ್ಯವಸ್ಥೆ ಕಲ್ಪಿಸಲಾಗಿದೆ. ಸಂಖ್ಯೆಗಳನ್ನು ಒತ್ತುವ ಮೂಲಕ ಪ್ರತಿಕ್ರಿಯೆ ನೀಡಬಹುದಾಗಿದೆ. ಸಂಪೂರ್ಣ ತೃಪ್ತರಾಗಿದ್ದರೆ, 1 ಅನ್ನು ಒತ್ತಿ, ಸಾಮಾನ್ಯ ತೃಪ್ತರಾಗಿದ್ದರೆ 2 ಒತ್ತಿ, ಅತೃಪ್ತರಾಗಿದ್ದರೆ 3 ಅನ್ನು ಒತ್ತಿ ಆಸ್ಪತ್ರೆ ಸೇವೆ ಬಗ್ಗೆ ಅಭಿಪ್ರಾಯ ತಿಳಿಸಬಹುದು. ಆತೃಪ್ತರಾಗಿದ್ದರೆ ಕಾರಣಗಳು ಆಯ್ಕೆ ಮಾಡಿ; ?ಉದ್ಯೋಗಿಗಳ ವರ್ತನೆ ?ಆಸ್ಪತ್ರೆಯ ಸ್ವಚ್ಛತೆ ? ಚಿಕಿತ್ಸೆಯ ದರ ? ಸೇವೆಯ ಗುಣಮಟ್ಟ ? ಇತರ ಕಾರಣಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮರುದಿನ ಆರೋಗ್ಯ ಇಲಾಖೆಯಿಂದ ಕರೆ ಮಾಡಿ ಧನ್ಯವಾದ ತಿಳಿಸಲಾಗುವುದು. ಸೇವೆಯ ಅನುಭವಗಳ ಕುರಿತು ಅಭಿಪ್ರಾಯ ಪಡೆದು ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮ ಕೈಗೊಳ್ಳಲಾಗುವುದು.

| ಡಾ. ಬಿ. ಪ್ರಭುದೇವಗೌಡ

ರಾಜ್ಯ ನೋಡಲ್ ಅಧಿಕಾರಿ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಆರೋಗ್ಯ ಇಲಾಖೆ

ಪ್ರತಿಕ್ರಿಯೆ ಹೀಗೆ ಕಳುಹಿಸಿ

ಸರ್ಕಾರದಿಂದ ನಿಮಗೆ ಬರುವ ಕರೆಗೆ ಪ್ರತಿಕ್ರಿಯೆ ನೀಡುವಾಗ ಟೈಪ್ ಮಾಡಿ ಸಂಪೂರ್ಣ ತೃಪ್ತರಾಗಿದ್ದರೆ ಸಂಖ್ಯೆ 1, ಸಾಮಾನ್ಯ ತೃಪ್ತರಾಗಿದ್ದರೆ 2, ಅತೃಪ್ತರಾಗಿದ್ದರೆ 3 ಎಂದು ನಮೂದಿಸಿ 5616115 ಗೆ ಕಳುಹಿಸಬೇಕು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...