More

    ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ – ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ

    ಚಿಮ್ಮಡ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸೂಪ್ತ ಪ್ರತಿಭೆ ಇರುವುದನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ಆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಂಯೋಜಕ ಶ್ರೀಶೈಲ ಬುರ್ಲಿ ಹೇಳಿದರು.

    ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಶಾಲೆಯ ಕವಿ ಚಕ್ರವರ್ತಿ ರನ್ನ ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯ ಅಧಿಕಾರಿ ಹಾಗೂ ಚಿಮ್ಮಡ ಸಮೂಹ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಕ್ಲಷ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಈ ಪ್ರತಿಭಾ ಕಾರಂಜಿ ವೇದಿಕೆ ಮೂಲಕ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದಾರೆ. ವಿದ್ಯಾರ್ಥಿಗಳು ಈ ವೇದಿಕೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

    ಶಿಕ್ಷಣ ಸಂಯೋಜಕ ಬಿ.ಎಂ.ಹಳೇಮನಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು- ಗೆಲುವಿಗಿಂತ ಭಾಗವಹಿಸುವುದು ಮುಖ್ಯ. ಸೋತವರು ವಿಚಲಿತರಾಗದೆ ಅದನ್ನು ಗೆಲುವಿನ ಮೆಟ್ಟಿಲಾಗಿ ಬಳಸಿಕೊಳ್ಳಬೇಕು ಎಂದರು.

    ಸಿಆರ್‌ಪಿ ದ್ರಾಕ್ಷಾಯಿಣಿ ಮಂಡಿ, ಮುಖ್ಯಶಿಕ್ಷಕ ಆರ್.ಎಸ್.ರೋಣದ, ಪತ್ರಕರ್ತ ಇಲಾಹಿ ಜಮಖಂಡಿ ಮಾತನಾಡಿದರು.

    ಗ್ರಾಪಂ ಅಧ್ಯಕ್ಷ ಆನಂದ ಕವಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಭಾರತಿ ಬರಗಲ್, ಪಿಕೆಪಿಎಸ್ ಅಧ್ಯಕ್ಷ ಬೀರಪ್ಪ ಗಡದಿ, ಎಸ್‌ಡಿಎಂಸಿ ಅಧ್ಯಕ್ಷ ಮೌನೇಶ ಬಡಿಗೇರ, ಶಿವಾನಂದ ಬೆಳಗಲಿ, ಮಲ್ಲಪ್ಪ ಆನದಿನ್ನಿ, ಮುಖ್ಯಶಿಕ್ಷಕ ಬಿ.ಎಸ್.ಹಲಗಿ ಸೇರಿದಂತೆ ಹಲವು ಪ್ರಮುಖರು ಆಗಮಿಸಿದ್ದರು. ವಿದ್ಯಾರ್ಥಿಗಳಿಂದ ಚಿತ್ರಕಲೆ, ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕ್ಲೆಮಾಡಲಿಂಗ್ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಕ್ಲಷ್ಟರ್‌ನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಸಾಪ ತಾಲೂಕಾಧ್ಯಕ್ಷ ಮ.ಕೃ.ಮೇಗಾಡಿ, ಪಿ.ಕೆ.ಮಳಲಿ, ಆರ್.ಎಂ.ಹೊಸಮನಿ ಸೇರಿದಂತೆ ಹಲವು ಶಿಕ್ಷಕರು ನಿರ್ಣಾಯಕರಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts